ವಾಡಿಕೆಯಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡು ಮಳೆ(Rain) ಸುರಿಯದೆ ಕೈಕೊಟ್ಟಿತ್ತು. ಅದರ ಅಂದಾಜಿನ ಮೇಲೆಯೇ ಈ ಬಾರಿಯ ಬೇಸಿಗೆ(Summer) ಭಾರಿ ಇರಲಿದೆ ಅನ್ನೋದನ್ನು ಊಹಿಸಲಾಗಿತ್ತು. ಅದೀಗ ಅನುಭವಕ್ಕೆ ಬರಲು ಆರಂಭವಾಗಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ(Temperature) ದಾಖಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.
ಎಲ್‌ನಿನೋ(L-Nino) ಪ್ರಭಾವದಿಂದ ಈ ವರ್ಷ ಸುಡುಬಿಸಿಲು ಹೆಚ್ಚಾಗಿರಲಿದೆ. ವಾಡಿಕೆಗಿಂತ ಹೆಚ್ಚು ಉಷ್ಣಾಂಶ ಇರಲಿದೆ. ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ಕೆಲ ದಿನಗಳ ತನಕ ಅತಿ ಹೆಚ್ಚು ಉಷ್ಣಾಂಶ ದಾಖಲಾಗಲಿದೆ. ಈ ವರ್ಷ ವಾಡಿಕೆಗಿಂತ ಅತಿಹೆಚ್ಚು ತಾಪಮಾನ ದಾಖಲಾಗಲಿದೆ. ಫೆಬ್ರವರಿ 6ರಂದು ಶೇಕಡಾ 33 ಡಿಗ್ರಿ ತಾಪಮಾನ ದಾಖಲಾಗಲಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಫೆಬ್ರವರಿ ತಿಂಗಳ ಮೂರನೇ ವಾರದಿಂದಲೇ ಬೆಂಗಳೂರು ಮತ್ತು ಸುತ್ತಮುತ್ತ ಬಿಸಿಲಿನ ಹೆಚ್ಚಳದ ಪ್ರಭಾವ ಎದುರಿಸಬೇಕಾಗುತ್ತದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ಫೆಬ್ರವರಿ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಸರಾಸರಿ ಮಳೆ 7 ಮಿಲಿ ಮೀಟರ್ ಮಳೆಯಾಗುತ್ತದೆ. ಈ ವರ್ಷ ಮಾತ್ರ ಸರಾಸರಿಗಿಂತ ಕಡಿಮೆ ಮಳೆ ದಾಖಲಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿಯಾದ ಎಲ್ನಿನೋ ಪರಿಣಾಮವು ಪ್ರಬಲವಾಗಿದೆ. ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸೆಖೆ ಹೆಚ್ಚಾಗುತ್ತಿದೆ ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.
ತಾಂತ್ರಿಕವಾಗಿ ಫೆಬ್ರವರಿ ಚಳಿಗಾಲದ ತಿಂಗಳಾಗಿದ್ದರೂ, ಎಲ್ ನಿನೋ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ನಂತರ ಬಿಸಿಲು ಕಡಿಮೆಯಾಗಬಹುದು. ಆದರೆ ಪ್ರಸ್ತುತ ಪರಿಸ್ಥಿತಿಗಳು ಬೇಸಿಗೆಯ ವಿಸ್ತರಣೆಯನ್ನು ಸೂಚಿಸುತ್ತಿದ್ದು, ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು ಎಂದು ಎ ಪ್ರಸಾದ್ ಹೇಳಿದ್ದಾರೆ.
– ಅಂತರ್ಜಾಲ ಮಾಹಿತಿ
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…