ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

March 16, 2025
11:20 AM
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 20 ರ ನಂತರ ಮಳೆಯಾಗುವ ಸಾಧ್ಯತೆಗಳಿವೆ.

17.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ದಿನಗಳು ಮತ್ತೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮತ್ತು ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಮತ್ತೆ ಆರಂಭವಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರದ ಕೊಳ್ಳೇಗಾಲ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿ ಅಧಿಕ ಒತ್ತಡದ ತಿರುಗುವಿಕೆಯ ಲಕ್ಷಣಗಳಿದ್ದು, ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 20 ರ ನಂತರ ಮಳೆಯಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror