Advertisement
MIRROR FOCUS

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

Share

ಸಾಮಾನ್ಯವಾಗಿ ಬಿಸಿಲು ಮತ್ತು ಬರದ ನಾಡು ಎಂದು ಕರೆಯಲ್ಪಡುವ ಕಲಬುರಗಿಯಲ್ಲಿ ಬೇಸಿಗೆ ಸಮಯದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗುವುದು ಸಹಜ. ಆದರೆ ಈ ಸಾಮಾನ್ಯ ಕಲ್ಪನೆಯನ್ನು ತಪ್ಪು ಎನ್ನುತ್ತಾ ಜಿಲ್ಲೆಯ ಜೇವರ್ಗಿ ತಾಲೂಕಿನ ಯಳವಾರ ಗ್ರಾಮದ ಯುವ ರೈತ ವಿಜಯಕುಮಾರ್ ಪಾಟೀಲ್ ವಿಭಿನ್ನ ಸಾಧನೆ ಮಾಡಿದ್ದಾರೆ.

ಬಿರು ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆಯುವ ಮೂಲಕ ಅವರು ಇತರ ರೈತರಿಗೆ ಮಾದರಿಯಾಗಿದ್ದಾರೆ. ಪದವಿ ಶಿಕ್ಷಣ ಪಡೆದ ವಿಜಯಕುಮಾರ್ ಪಾಟೀಲ್, ಆರಂಭದಲ್ಲಿ ಗುತ್ತಿಗೆದಾರರಾಗಿ ಜೀವನ ಆರಂಭಿಸಿದರೂ, ನಂತರ ತಮ್ಮ ಕುಟುಂಬದ ಕೃಷಿ ಪರಂಪರೆಯನ್ನು ಮುಂದುವರಿಸಲು ಕೃಷಿಯತ್ತ ಮುಖ ಮಾಡಿದರು.

ಮಳೆಗಾಲದಲ್ಲಿ ಹತ್ತಿ ಮತ್ತು ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವ ಅವರು, ಬೇಸಿಗೆ ಕಾಲದಲ್ಲೂ ಪ್ರತಿ ಎಕರೆಗೆ ಸುಮಾರು 3 ರಿಂದ 4 ಕ್ವಿಂಟಲ್ ಎಳ್ಳು ಬೆಳೆಯುತ್ತಿದ್ದಾರೆ. ಇದು ಸಾಮಾನ್ಯವಾಗಿ ಬರ ಪ್ರದೇಶಗಳಲ್ಲಿ ಅಪರೂಪದ ಸಾಧನೆಯಾಗಿದೆ.

ಎಳ್ಳು ಬೆಳೆಯುವುದಕ್ಕೆ ಮಾತ್ರ ಸೀಮಿತವಾಗದೇ, ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ತಯಾರಿಸಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಗೆ ಸರಬರಾಜು ಮಾಡುತ್ತಿದ್ದಾರೆ. ಜೊತೆಗೆ ರೈತರಿಗೆ ತರಬೇತಿ ನೀಡಿ, ನೀರಿನ ಸಮರ್ಪಕ ಬಳಕೆ, ಬೀಜದ ಆಯ್ಕೆ ಮತ್ತು ರೋಗ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅವರ ಸಾಧನೆಯನ್ನು ಗುರುತಿಸಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ “ಶ್ರೇಷ್ಠ ಕೃಷಿ ಪ್ರಶಸ್ತಿ” ಹಾಗೂ “ಕೃಷಿ ಪಂಡಿತ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.

ಕೃಷಿ ವಿಜ್ಞಾನಿಗಳ ನೆರವಿನಿಂದ ಆರಂಭದಲ್ಲಿ 10 ಎಕರೆ ಪ್ರದೇಶದಲ್ಲಿ 42 ಕ್ವಿಂಟಲ್  ಎಳ್ಳು ಬೆಳೆದಿದ್ದೇನೆ.  ತಮ್ಮ ಕೃಷಿ ಚಟುವಟಿಕೆ ಕುರಿತು ಸಾಮಾಜಿಕ ಜಾಲಾತಾಣಗಳಲ್ಲಿ ಪ್ರಚಾರವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳು ಸೇರಿ ಹೊರ ರಾಜ್ಯಗಳಿಂದ ಬಿತ್ತನೆ ಬೀಜಕ್ಕೆ ಬೆಡಿಕೆ ಬರುತ್ತಿದೆ. ಉತ್ತಮ ಲಾಭ ಪಡೆದುಕೊಳ್ಳುತ್ತಿದ್ದೇನೆರೈತ ವಿಜಯ್ ಕುಮಾರ್ ಪಾಟೀಲ್

ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡಿರುವ ಅವರು, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2 ಎಕರೆ ಪ್ರದೇಶದಲ್ಲಿ ಮೀನು ಹೊಂಡ ನಿರ್ಮಿಸಿ ಕೃಷಿಯೊಂದಿಗೆ ಮೀನು ಸಾಕಾಣಿಕೆ ಕೂಡ ಮಾಡುತ್ತಿದ್ದಾರೆ.

ಡಿಜಿಟಲ್ ಯುಗಕ್ಕೆ ತಕ್ಕಂತೆ ತಮ್ಮ ಉತ್ಪನ್ನಗಳ ಮಾರಾಟದಲ್ಲೂ ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದು, ದೂರವಾಣಿ ಮತ್ತು ಆನ್‌ಲೈನ್ ಮೂಲಕ ಬಿತ್ತನೆ ಬೀಜಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಮಲ್ಲಪ್ಪ ಅವರ ಪ್ರಕಾರ, ಬೇಸಿಗೆಯಲ್ಲಿ ಕೃಷಿ ಮಾಡಲು ಹಿಂಜರಿಯುತ್ತಿದ್ದ ಪ್ರದೇಶದಲ್ಲಿ ವಿಜಯಕುಮಾರ್ ಪಾಟೀಲ್ ಅವರು ತರಬೇತಿ ಪಡೆದು ಯಶಸ್ವಿಯಾಗಿ ಎಳ್ಳು ಬೆಳೆಯುವ ಮೂಲಕ ಇತರ ರೈತರಿಗೆ ದಾರಿದೀಪರಾಗಿದ್ದಾರೆ.

ಒಟ್ಟಾರೆ, ಯುವಕರು ಕೃಷಿಯಿಂದ ದೂರವಾಗುತ್ತಿರುವ ಈ ಕಾಲದಲ್ಲಿ ವಿಜಯಕುಮಾರ್ ಪಾಟೀಲ್ ಅವರ ಸಾಧನೆ ಅನೇಕ ಯುವ ರೈತರಿಗೆ ಸ್ಪೂರ್ತಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A young farmer from Yalwar village in Kalaburagi district, Vijaykumar Patil, has successfully cultivated sesame during peak summer, defying conventional farming patterns in drought-prone regions. By adopting modern techniques, efficient water use, and seed production, he not only achieved good yields but also built a market network across states. His efforts have earned him prestigious agricultural awards and recognition as a role model for young farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

3 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago