ಬಾಹ್ಯಾಕಾಶದಲ್ಲಿ ಸಾವಿನ ಗುಹೆಯೊಳಗೆ ತನ್ನ ಸಹಯಾತ್ರಿಯೊಂದಿಗೆ ಧೈರ್ಯದಿಂದ ಸೆಣೆಸುತ್ತಿರುವ ಸುನಿತಾ ವಿಲಿಯಮ್ಸ್………..

August 16, 2024
10:34 AM

ಬಾಹ್ಯಾಕಾಶ(Space) ಯಾತ್ರೆಯೇ ಒಂದು ರೀತಿಯಲ್ಲಿ ಬದುಕಿನ ಅಂತಿಮ ಯಾತ್ರೆಯಂತೆ ನನಗನಿಸುತ್ತದೆ. ಈಗಲೂ ಸಹ ನಮ್ಮಂತ ಸಾಮಾನ್ಯ ಜನ ಬಸ್ಸಿನಲ್ಲೋ(Bus), ರೈಲಿನಲ್ಲೂTrain), ವಿಮಾನದಲ್ಲೋ(Flight) ಸಂಚರಿಸುವಾಗ ಬಹುತೇಕ ನಮ್ಮ ಮನಸ್ಸಿನಲ್ಲಿ ಸುಳಿಯುವ ಭಾವನೆ ಎಂದರೆ, ಏನಾದರೂ ಅಪಘಾತವಾಗಿ(Accident) ನಾವು ಸಾಯಬಹುದೇನೋ ಎನ್ನುವ ಒಂದು ರೀತಿಯ ಮಾನಸಿಕ(Mental) ಸ್ಥಿತಿಯಲ್ಲಿಯೇ ಪ್ರಯಾಣಿಸುತ್ತಿರುತ್ತೇವೆ. ಅದು ನಿರಂತರವಾಗಿ ನಮ್ಮೊಳಗೆ ಹುಟ್ಟಿನಿಂದ ಸಾಯುವವರೆಗೂ ಪ್ರತಿ ಪ್ರಯಾಣದಲ್ಲೂ ಕಾಡುತ್ತಲೇ ಇರುತ್ತದೆ..

Advertisement
Advertisement
Advertisement

ಇದರ ಜೊತೆಗೆ ಯಾವಾಗಲಾದರೂ, ಏನಾದರೂ ಕೆಲಸ ಕಾರ್ಯಗಳ ನಿಮಿತ್ತ ಕೆಲವು ವಾರಗಳು ಅಥವಾ ಕೆಲವು ತಿಂಗಳುಗಳು ಮನೆಯಿಂದ ಹೊರಗೆ ಇರಬೇಕಾದ ಸಂದರ್ಭದಲ್ಲಿ ಸಹ ಒಂದಷ್ಟು ಅಧೀರರಾಗುತ್ತೇವೆ ಅಥವಾ ಭಾವನಾತ್ಮಕ ನೋವು ಕಾಡುತ್ತದೆ. ಕೆಲವು ದಿನ ಎಲ್ಲರನ್ನೂ ಬಿಟ್ಟಿರಬೇಕಾಗುತ್ತದೆ ಎಂಬ ಭಾವ, ಅದರಲ್ಲೂ 24 ಗಂಟೆ ಸಂಪರ್ಕದಲ್ಲಿರಬಹುದಾದ ಮೊಬೈಲ್, ವಿಡಿಯೋ ಕಾಲ್ ಎಲ್ಲವೂ ಇದ್ದ ನಂತರವೂ ಸಹ, ಹಾಗೆಯೇ ಮನಸ್ಸು ಮಾಡಿದರೆ ಕೆಲವೇ ಗಂಟೆಗಳ ಅವಧಿಯಲ್ಲಿ ಮತ್ತೆ ನಮ್ಮ ಮನೆ ತಲುಪಬಹುದು ಎಂಬ ಅವಕಾಶ ಮತ್ತು ವ್ಯವಸ್ಥೆ ಇದ್ದರೂ, ನಮಗೆ ಆ ಹತಾಶೆ, ನೋವು, ವಿರಹ ಕಾಡುತ್ತಲೇ ಇರುತ್ತದೆ…..

Advertisement

ಕೆಲವರು ಅತಿ ಹೆಚ್ಚು ಎಂದರೆ ನೂರು ದಿನಗಳ ಕಾಲ ಮನೆ ಬಿಟ್ಟು ಬೆಂಗಳೂರಿನ ಮುಖ್ಯ ಪ್ರದೇಶದಲ್ಲಿಯೇ ಇರುವ ಒಂದು ಸುಸಜ್ಜಿತ ಬಿಗ್ ಬಾಸ್ ಬಂಗಲೆಯಲ್ಲಿ ವಾಸಿಸಲು ಸ್ಪರ್ಧೆಯ ಕಾರಣಕ್ಕಾಗಿ ಹೋಗುವಾಗಲೂ ಅವರು ಪಡುವ ಆತಂಕ, 40 – 50 ದಿನಗಳ ನಂತರ ಅವರ ಮನೆಯವರನ್ನು ನೋಡಿದಾಗ ಗೊಳೋ ಎಂದು ಅಳುವುದು ನೋಡಿದರೆ ಸುನಿತಾ ವಿಲಿಯಮ್ಸ್(Sunitha Williams) ಸಾಹಸ ಎಷ್ಟು ಮಹತ್ವದ್ದು ಎಂಬುದು ಅರ್ಥವಾಗುತ್ತದೆ…..

ನೂರಾರು ಕಿಲೋಮೀಟರ್ ಗಳು ಕೇವಲ ಒಬ್ಬ ಸಹವರ್ತಿಯೊಂದಿಗೆ ಏನೂ ಗ್ಯಾರಂಟಿ ಇಲ್ಲದ, ಆಕಸ್ಮಿಕ ಅಪಘಾತವಾಗುವ ಸಾಧ್ಯತೆಯೇ ಹೆಚ್ಚಿರುವ ವಾಹನದಲ್ಲಿ, ಅಷ್ಟು ದೂರ ಹೋಗಿ ಸಂಶೋಧನೆ ಮಾಡಿ, ಅಲ್ಲಿ ಕೆಲವು ದಿನಗಳಿದ್ದು ವಾಪಸ್ಸು ಬರುವ, ಬಹುದೊಡ್ಡ ಸಾವಿನ ಗುಹೆಯೊಳಗೇ ಹೋಗಿದ್ದಾರೆ. ಈಗ ನಿಜವಾಗಿಯೂ ವಾಪಸ್ ಬರುವ ತೊಂದರೆಯಿಂದಾಗಿ ಅಂದರೆ, ಅವರ ವಾಹನದ ಹೀಲಿಯಂ ಸೋರಿಕೆಯ ಕಾರಣದಿಂದ ಇನ್ನೂ ವಾಪಸ್ ಬರುವುದು ನಿಶ್ಚಿತವಾಗದೇ ಇರುವ ಸಮಯದಲ್ಲಿ, ಆಕೆ ಎದುರಿಸುತ್ತಿರುವ ಮಾನಸಿಕ ಪರಿಸ್ಥಿತಿಯ ಬಗ್ಗೆ ಒಂದಷ್ಟು ಕುತೂಹಲ. ಅದನ್ನು ವಿವರಿಸುವುದು ತುಂಬಾ ಕಷ್ಟ. ಬಹುಶಃ ಸಾಮಾನ್ಯರಾದ ನಮ್ಮ ಊಹೆಗೂ ಮೀರಿದ್ದು……

Advertisement

ಅವರು ಸಾಕಷ್ಟು ತರಬೇತಿಯನ್ನು ಪಡೆದಿರುತ್ತಾರೆ ಮತ್ತು ಅದಕ್ಕಾಗಿ ಮಾನಸಿಕವಾಗಿ ಸದೃಢವಾಗಿರುತ್ತಾರೆ ಎಂಬುದು ನಿಜ, ಅಲ್ಲದೆ ಅವರಿಗೆ ಇದು ಎರಡನೆಯ ಬಾರಿಯಾದ್ದರಿಂದ ಸ್ವಲ್ಪ ಅನುಭವವೂ ಇರುತ್ತದೆ ಎನ್ನಬಹುದು. ಆದರೆ ಎಷ್ಟೇ ತರಬೇತಿ, ಅನುಭವ ಇದ್ದರು ಆ ಪ್ರಯಾಣ ತುಂಬಾ ಕಠಿಣ ಮತ್ತು ಅತ್ಯಂತ ಅಪಾಯಕಾರಿ ಎಂದು ಎಲ್ಲರಿಗೂ ತಿಳಿದಿರುವುದೇ. ಇಲ್ಲಿ ತಾಂತ್ರಿಕ ದೋಷಗಳು, ಸಾಹಸ ಪ್ರವೃತ್ತಿ ಇತ್ಯಾದಿಗಳನ್ನೆಲ್ಲ ಹೊರತುಪಡಿಸಿ, ಕೇವಲ ಸುನಿತಾ ವಿಲಿಯಮ್ಸ್ ಅವರ ಮನ:ಸ್ಥಿತಿಯನ್ನು ಮಾತ್ರ ಗಣನೆಗೆ ತೆಗೆದುಕೊಂಡಾಗ ನಾವೆಲ್ಲ ಖಂಡಿತ ಅದರಿಂದ ಬಹಳ ದೂರ ಇದ್ದೇವೆ ಅನಿಸುತ್ತದೆ……

ಅಂದರೆ ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ ವಿಷಯಗಳಲ್ಲಿ ನಾವು ಮತ್ತು ನಮ್ಮ ಪ್ರತಿಕ್ರಿಯೆ ಎಷ್ಟೊಂದು ದುರ್ಬಲವಾಗಿರುತ್ತದೆ ಎಂದರೆ, ಒಮ್ಮೊಮ್ಮೆ ನಮಗೇ ನಮ್ಮ ಬಗ್ಗೆ ಜಿಗುಪ್ಸೆ ಹುಟ್ಟುತ್ತದೆ. ಸುನಿತಾ ವಿಲಿಯಮ್ಸ್ ಅಂತ ಅಪಾರ ಧೈರ್ಯಶಾಲಿ, ದೃಢ ವಿಶ್ವಾಸಿ ನಿಜಕ್ಕೂ ನಮಗೆ ಸ್ಪೂರ್ತಿಯಾಗಬೇಕು, ಮಾದರಿಯಾಗಬೇಕು. ನಮ್ಮ ಎಲ್ಲಾ ಕಷ್ಟಗಳನ್ನು ಎದುರಿಸುವ ಸಮಯದಲ್ಲಿ ಆಕೆಯ ನೆನಪು ನಮ್ಮಲ್ಲಿ ಆತ್ಮವಿಶ್ವಾಸ ಜೀವನೋತ್ಸಾಹ ಮೂಡಿಸಬೇಕು……

Advertisement

ತನ್ನ ಭಾಹ್ಯಾಕಾಶ ಜೊತೆಗಾರನೊಂದಿಗೆ ಆಕೆ ಏನೆಲ್ಲ ಮಾತನಾಡುತ್ತಿರಬಹುದು, ಆಕೆಯ ಮನದಲ್ಲಿ ಏನೆಲ್ಲಾ ಭಾವನೆ ಮೂಡಿರಬಹುದು, ತನ್ನನ್ನು ಕರೆತರುವ ಜವಾಬ್ದಾರಿ ವಹಿಸಿರುವ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದೊಂದಿಗೆ ಆಕೆ ಏನೆಲ್ಲಾ ವಿಚಾರ ವಿನಿಮಯ ಮಾಡಿಕೊಳ್ಳುತ್ತಿರಬಹುದು, ತನ್ನ ಜೀವ ಮತ್ತು ಜೀವನದ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ಮನಸ್ಸಿನಲ್ಲಿ ಮೂಡುತ್ತಿರಬಹುದು, ಈ ಎಲ್ಲವೂ ತುಂಬಾ ಕುತೂಹಲ ಮತ್ತು ಸಂಕೀರ್ಣವೆನಿಸುತ್ತದೆ….. ಅದರಲ್ಲೂ ಇಲ್ಲಿಂದ ನಾವು ಅದನ್ನು ಊಹಿಸಿಕೊಂಡರೆ ಅದು ಮತ್ತಷ್ಟು ಕಠಿಣವಾಗಿ ಕಾಣುತ್ತದೆ. ಸಣ್ಣಪುಟ್ಟ ಕಷ್ಟಗಳಿಗೆ ತೀರಾ ಕುಸಿದು ಹೋಗುವ ನಾವು ನಿಜಕ್ಕೂ ಸುನೀತಾ ವಿಲಿಯಮ್ಸ್ ಅವರ ಪರಿಸ್ಥಿತಿಯನ್ನು ನೆನಪಿಸಿಕೊಂಡು ನಮ್ಮ ಕೆಲಸಗಳಲ್ಲಿ ಧೈರ್ಯವಾಗಿ ಮುನ್ನುಗ್ಗಬಹುದು. ಸಾವಿನ ಆತಂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು……

ಪ್ರಕೃತಿಯ ಶಿಶುವಾದ ನಾವು ಸಾವಿಗೆ ಅಂಜುತ್ತಲೇ ಪ್ರತಿನಿತ್ಯ ಅದರ ಛಾಯೆಯಲ್ಲಿಯೇ ಇಡೀ ಜೀವನ ಸಾಗಿಸುತ್ತೇವೆ. ಆದರೆ ಸುನಿತಾ ವಿಲಿಯಮ್ಸ್ ನಂತವರು ಸಾವಿಗೇ ಸವಾಲಾಗಿ ಬದುಕುತ್ತಿರುತ್ತಾರೆ. ನಾವುಗಳು ಜೀವನದಲ್ಲಿ ಅನೇಕ ಕೊರತೆಗಳ ಬಗ್ಗೆಯೇ ಮಾತನಾಡುತ್ತಾ ಬದುಕಿನ ಸ್ವಾರಸ್ಯವನ್ನೇ ಕಳೆದುಕೊಂಡಿರುತ್ತೇವೆ. ಇಂತಹ ಸಂದರ್ಭದಲ್ಲಿ ಅವರ ಬಾಹ್ಯಾಕಾಶಯಾನ ನಮ್ಮಲ್ಲಿ ಜೀವನೋತ್ಸಾಹ ತುಂಬಿಸಲಿ ಎಂಬ ಕಾರಣದಿಂದ ಲೇಖನ… ಏನಾದರಾಗಲಿ, ಸುನೀತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಇನ್ನು ಕೆಲವೇ ದಿನಗಳಲ್ಲಿ ಯಶಸ್ವಿಯಾಗಿ ಭೂಮಿಗೆ ಮರಳಲಿ, ಇನ್ನಷ್ಟು ದಿನ ಆಕೆ ತನ್ನ ಕುಟುಂಬದೊಂದಿಗೆ ಜೀವನ ಕಳೆಯಲಿ, ಆಕೆಯ ಅನುಭವ ನಮ್ಮೊಡನೆ ಹಂಚಿಕೊಳ್ಳಲಿ ಎಂದು ಆಶಿಸುತ್ತಾ……

Advertisement
ಬರಹ :
 ವಿವೇಕಾನಂದ. ಎಚ್. ಕೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

ಇದನ್ನೂ ಓದಿ

ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror