ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

March 17, 2025
8:07 AM
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ.

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು, ಭಾನುವಾರ ತಲಪುವ ನಿರೀಕ್ಷೆ ಇದೆ ಎಂದು ನಾಸಾ ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರನ್ನು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್‌ನಲ್ಲಿ ಸಾಗಿಸಲಾಗುವುದು, ಅದು ಭಾನುವಾರ ಮುಂಜಾನೆ ಭೂಮಿಗೆ ತಲುಪಲಿದೆ ಎಂದು ನಾಸಾ ಹೇಳಿದೆ.………ಮುಂದೆ ಓದಿ……..

Advertisement
Advertisement

ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಭೂಮಿಗೆ ಕರೆ ತರಲು ನಾಸಾ ವಿಜ್ಞಾನಿಗಳ ತಂಡ ಉಡಾವಣೆ ಮಾಡಿದ ಸ್ಪೇಸ್‌ಎಕ್ಸ್‌ ಡ್ರ್ಯಾಗನ್‌ ಸ್ಪೇಸ್‌ಕ್ರಾಫ್ಟ್‌ ‘ದಿ ಕ್ರ್ಯೂ-10’ ಭಾನುವಾರ ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿತ್ತು. ಅಲ್ಲಿನ ಸ್ಥಿತಿಗತಿ ಗಮನಿಸಿ ಇದೀಗ ಅಧಿಕೃತವಾದ ಹೇಳಿಕೆಯನ್ನು ನಾಸಾ ಹೇಳಿದೆ.

ಕಳೆದ ವರ್ಷದ ಜೂನ್‌ 5 ರಂದು ಬೋಯಿಂಗ್‌ನ ಸ್ಟಾರ್‌ಲೈನ್‌ ಗಗನನೌಕೆ ಮೂಲಕ ಸುನಿತಾ, ಬುಚ್‌ ಮತ್ತಿತರ ಗಗನಯಾತ್ರಿಗಳು ಗಗನಯಾನ ಕೈಗೊಂಡಿದ್ದರು. ಎಂಟು ದಿನಗಳ ಬಳಿಕ ಭೂಮಿಗೆ ಮರಳ ಬೇಕಿದ್ದ ಗಗನಯಾನಿಗಳು ನೌಕೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿದ್ದರು. ಇದೀಗ ಕರೆತರುವ ಪ್ರಯತ್ನದ ಬಳಿಕ ಗಗನಯಾತ್ರಿಗಳ ಭೂಮಿ ಪ್ರವೇಶವು  ಫ್ಲೋರಿಡಾ ಕರಾವಳಿಯಲ್ಲಿ ನಡೆಯಲಿದೆ ಎಂದು ನಾಸಾ ಭಾನುವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ. ಹವಾಮಾನ ಪರಿಸ್ಥಿತಿ ಸಹಿತ ಇತರ ಎಲ್ಲಾ ಅಂಶಗಳನ್ನು ಗಮನಿಸಿಕೊಂಡು ನೌಕೆ ಇಳಿಯಲಿದೆ.

ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಹಿಂತಿರುಗಲಿದ್ದಾರೆ, ಸೋಮವಾರ ಸಂಜೆಯಿಂದ  ಸಿದ್ಧತೆಗಳು ಪ್ರಾರಂಭವಾದಾಗ ಪ್ರಯಾಣವನ್ನು ನೇರ ಪ್ರಸಾರ ಮಾಡಲಾಗುವುದು ಎಂದೂ ನಾಸಾ ಹೇಳಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror