ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.
ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧಿ ವಿದೇಶಿ ಉತ್ಪನ್ನಗಳಿಗೆ ಕಡಿವಾಣ ಹಾಕಿ ಖಾದಿ ಉತ್ಪನ್ನಗಳನ್ನು ನೇಯುವ ಮೂಲಕ ಸ್ವದೇಶಿ ಉತ್ಪನ್ನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ದೇಶದ ಅಸ್ಮಿತೆ, ಸ್ವಾವಲಂಬನೆಯ ಪ್ರತೀಕವಾದ ಖಾದಿ ಉಳಿಸಿ ಬೆಳೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಸರ್ಕಾರದಿಂದ ಯಾದಗಿರಿ ಜಿಲ್ಲೆಯಲ್ಲಿ 15 ದಿನಗಳ ಕಾಲ ರಾಜ್ಯ ಮಟ್ಟದ ಖಾದಿ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಜನರು ಖಾದಿ ಉತ್ಪನ್ನಗಳನ್ನು ಖರೀದಿಸುವಂತೆ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…