ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದಾರೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ 2025-26 ನೇ ಸಾಲಿನಲ್ಲಿ ಕರ್ನಾಟಕದ ಮಾವು ಸಂಗ್ರಹಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕ್ವಿಂಟಾಲ್‌ಗೆ 1616 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ್ದ ಕುಮಾರಸ್ವಾಮಿ ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel