ಹತ್ತಿ ಬೆಳೆಗೆ ಬೆಂಬಲ ಬೆಲೆ | ಯಾದಗಿರಿಯಲ್ಲಿ 21 ಕೇಂದ್ರಗಳ ಆರಂಭ

November 10, 2024
12:00 PM

ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿ ಮಾಡಲು 21 ಖರೀದಿ ಕೇಂದ್ರಗಳನ್ನು ತೆರೆದಿದ್ದು, ಈ ಮೂಲಕ ರೈತರಿಗೆ ನೆರವಾಗಿದೆ. 

Advertisement
Advertisement

ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, 2024-25 ನೇ ಸಾಲಿನಲ್ಲಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ,89600 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 48600 ಎಕ್ರೆ ಪ್ರದೇಶದಲ್ಲಿ  ಮಾತ್ರ ಹತ್ತಿ ಬೆಳೆಯಲಾಗಿದೆ. ಖುಷ್ಕಿ ಪ್ರದೇಶದಲ್ಲಿ 1  ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಒಟ್ಟಾರೆ 1.96 ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ  ಹತ್ತಿ ಬೆಳೆ ಬೆಳೆಯಲಾಗಿದೆ.

ವಿವಿಧ ತಳಿಗಳಿಗೆ,  ವಿವಿಧ ರೀತಿಯ ದರ ನಿಗದಿಪಡಿಸಲಾಗಿದ್ದು, 6871 ರೂಪಾಯಿಯಿಂದ 7521   ರೂಪಾಯಿವರೆಗೆ ದರ  ನಿಗದಿಪಡಿಸಲಾಗಿದೆ. ಹೀಗಾಗಿ ರೈತರು ತಾವು ಬೆಳೆದ ಹತ್ತಿಯನ್ನು ಖರೀದಿ ಕೇಂದ್ರಗಳಿಗೆ ತೆರಳಿ,  ಮಾರಾಟ ಮಾಡುತ್ತಿದ್ದು, ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತದಿಂದ, ಜಿಲ್ಲೆಯ ವಿವಿಧೆಡೆ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಘಟಕಗಳನ್ನು ಗುರುತಿಸಿ, ಈ ಘಟಕಗಳನ್ನು ಮಾರುಕಟ್ಟೆ ಉಪ ಪ್ರಾಂಗಣ ಎಂದು ಗುರುತಿಸಲಾಗಿದೆ.

ರೈತರು ತಾವು ಬೆಳೆದ ಹತ್ತಿಯನ್ನು ಈ ಪ್ರಾಂಗಣದಲ್ಲಿ ತಂದು ಮಾರಾಟ ಮಾಡಬಹುದು. ಈ ಕೇಂದ್ರಗಳಲ್ಲಿ ಹತ್ತಿ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ಪಹಣಿಯನ್ನು ಕೊಂಡೊಯ್ಯಬೇಕು.

ಹತ್ತಿ ಬೆಳೆಗಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರು ತಾವು ಬೆಳೆದ ಹತ್ತಿಯನ್ನು ನೇರವಾಗಿ ಸರ್ಕಾರಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಮಾಡುವುದು ಇದರ ಉದ್ದೇಶ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಯಮನಪ್ಪ ಚಿತ್ತಾಪುರ ಹೇಳಿದ್ದಾರೆ.

Advertisement

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ಮಾಡುತ್ತಿರುವುದು ಖುಷಿಯ ವಿಚಾರ, ಇತರ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಿದರೆ ರೈತರಿಗೆ ಅನುಕೂಲವಾಗಿದೆ ಎಂದು ರೈತರು ಹೇಳಿದ್ದಾರೆ.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ
ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group