ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿ ಮಾಡಲು 21 ಖರೀದಿ ಕೇಂದ್ರಗಳನ್ನು ತೆರೆದಿದ್ದು, ಈ ಮೂಲಕ ರೈತರಿಗೆ ನೆರವಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, 2024-25 ನೇ ಸಾಲಿನಲ್ಲಿ ಜಿಲ್ಲೆಯ ನೀರಾವರಿ ಪ್ರದೇಶದಲ್ಲಿ,89600 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 48600 ಎಕ್ರೆ ಪ್ರದೇಶದಲ್ಲಿ ಮಾತ್ರ ಹತ್ತಿ ಬೆಳೆಯಲಾಗಿದೆ. ಖುಷ್ಕಿ ಪ್ರದೇಶದಲ್ಲಿ 1 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಒಟ್ಟಾರೆ 1.96 ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ ಹತ್ತಿ ಬೆಳೆ ಬೆಳೆಯಲಾಗಿದೆ.
ವಿವಿಧ ತಳಿಗಳಿಗೆ, ವಿವಿಧ ರೀತಿಯ ದರ ನಿಗದಿಪಡಿಸಲಾಗಿದ್ದು, 6871 ರೂಪಾಯಿಯಿಂದ 7521 ರೂಪಾಯಿವರೆಗೆ ದರ ನಿಗದಿಪಡಿಸಲಾಗಿದೆ. ಹೀಗಾಗಿ ರೈತರು ತಾವು ಬೆಳೆದ ಹತ್ತಿಯನ್ನು ಖರೀದಿ ಕೇಂದ್ರಗಳಿಗೆ ತೆರಳಿ, ಮಾರಾಟ ಮಾಡುತ್ತಿದ್ದು, ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತದಿಂದ, ಜಿಲ್ಲೆಯ ವಿವಿಧೆಡೆ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಘಟಕಗಳನ್ನು ಗುರುತಿಸಿ, ಈ ಘಟಕಗಳನ್ನು ಮಾರುಕಟ್ಟೆ ಉಪ ಪ್ರಾಂಗಣ ಎಂದು ಗುರುತಿಸಲಾಗಿದೆ.
ರೈತರು ತಾವು ಬೆಳೆದ ಹತ್ತಿಯನ್ನು ಈ ಪ್ರಾಂಗಣದಲ್ಲಿ ತಂದು ಮಾರಾಟ ಮಾಡಬಹುದು. ಈ ಕೇಂದ್ರಗಳಲ್ಲಿ ಹತ್ತಿ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ಪಹಣಿಯನ್ನು ಕೊಂಡೊಯ್ಯಬೇಕು.
ಹತ್ತಿ ಬೆಳೆಗಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರು ತಾವು ಬೆಳೆದ ಹತ್ತಿಯನ್ನು ನೇರವಾಗಿ ಸರ್ಕಾರಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಮಾಡುವುದು ಇದರ ಉದ್ದೇಶ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಯಮನಪ್ಪ ಚಿತ್ತಾಪುರ ಹೇಳಿದ್ದಾರೆ.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಯೋಜನೆಯಡಿ ಹತ್ತಿ ಖರೀದಿ ಮಾಡುತ್ತಿರುವುದು ಖುಷಿಯ ವಿಚಾರ, ಇತರ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಿದರೆ ರೈತರಿಗೆ ಅನುಕೂಲವಾಗಿದೆ ಎಂದು ರೈತರು ಹೇಳಿದ್ದಾರೆ.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…