2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗದಗ ಜಿಲ್ಲೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 6783 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶೇಂಗಾ ಖರೀದಿಸುವ ಕುರಿತು ಜರುಗಿದ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಾಲ್ ಶೇಂಗಾ ಖರೀದಿಸಬಹುದಾಗಿದೆ. ಬೆಂಬಲ ಬೆಲೆಯಲ್ಲಿ ಶೇಂಗಾ ಹುಟ್ಟುವಳಿ ಖರೀದಿಯ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು. ಜಿಲ್ಲೆಯ 10 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದರು.
ಶರಾವತಿ ಯೋಜನೆಯ ಬಗ್ಗೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಯ ಬರೆದ ಬರಹ...
ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ…
ಕಲಬುರ್ಗಿಯಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…
ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ …
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…
ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…