ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಪಾಯಿಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಸೂಚಿಸಿದ್ದಾರೆ. ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಕೃಷಿ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel