ಯಾವುದೇ ದೂರು ನೀಡದಿದ್ದರೂ ದ್ವೇಶ ಭಾಷಣದ ಮೇಲೆ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸುವ 2022 ರ ಆದೇಶದ ವ್ಯಾಪ್ತಿಯನ್ನು ಸುಪ್ರೀಂಕೋರ್ಟ್ ಇಂದು ವಿಸ್ತರಿಸಿದೆ. ಅದೇ ವೇಳೆ ಪ್ರಕರಣಗಳನ್ನು ದಾಖಲಿಸುವಲ್ಲಿ ವಿಳಂಬವನ್ನು ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಿದೆ. ಇದನ್ನು ಗಂಭೀರ ಅಪರಾಧ ಎಂದು ಬಣ್ಣಿಸಿದ ಸುಪ್ರೀಂಕೋರ್ಟ್, ದ್ವೇಷದ ಭಾಷಣವು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ದೇಶಾದ್ಯಂತ ದ್ವೇಷದ ಅಪರಾಧಗಳ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.
ದ್ವೇಷ ಭಾಷಣ ಅಪರಾಧಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ದ್ವೇಷದ ಭಾಷಣಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಪೀಠವು ಈ ಹಿಂದೆ ಮಹಾರಾಷ್ಟ್ರ ರಾಜ್ಯದಿಂದ ಪ್ರತಿಕ್ರಿಯೆ ಕೇಳಿತ್ತು.
ದ್ವೇಷ ಭಾಷಣ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ಅಅಕ್ಟೋಬರ್ 21, 2022 ರಂದು ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಉತ್ತರಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಅನ್ವಯಿಸಲಾಗಿತ್ತು.
ಯಾರೇ ಈ ರೀತಿ ಹೇಳಲಿ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತೇವೆ ಇದರಿಂದಾಗಿ ಪೀಠಿಕೆಯಿಂದ ಕಲ್ಪಿಸಲ್ಪಟ್ಟಿರುವ ಭಾರತದ ಜಾತ್ಯತೀತ ಪಾತ್ರವನ್ನು ಸಂರಕ್ಷಿಸಲಾಗಿದ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…