ತಮಿಳುನಾಡಿಗೆ ನೀರು ಬಿಡಲು ಸುಪ್ರೀಮ್ ಕೋರ್ಟ್ ಆದೇಶ | ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರ

September 21, 2023
1:37 PM
ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ. . ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯಲಿದೆ.
Advertisement

ಸುಪ್ರೀಮ್‌ ಕೋರ್ಟ್‌ ರಾಜ್ಯದ ರೈತರ ಪಾಲಿಗೆ ಮರಣ ಶಾಸನ ಬರೆಯಲು ಹೊರಟಿದೆ. ರಾಜ್ಯದಲ್ಲಿ ನೀರು ಇಲ್ಲಾ ಅಂದ್ರು, ತಮಿಳುನಾಡಿಗೆನಿಂದ ನೀರು ಬಿಡಲೇ ಬೇಕು ಎಂದು ಆದೇಶ ನೀಡಿದೆ. ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಮತ್ತೆ ಸುಪ್ರೀಂ ಕೋರ್ಟ್ ಆದೇಶ ಕೊಟ್ಟಿದೆ.

Advertisement

ಈ ಹಿನ್ನೆಲೆ ಬೆಂಗಳೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ. . ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯಲಿದೆ. ಹಾಗೂ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಕೆಆಸ್​ಎಸ್ ಪಕ್ಷ ಕರೆ ಕೊಟ್ಟಿದೆ. ಮಂಡ್ಯದ ಸಂಜಯ್ ಸರ್ಕಲ್​ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಕಾವೇರಿಗಾಗಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರವೇ ಅಧ್ಯಕ್ಷ ನಾರಾಯಣಗೌಡ ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಬಾರದು. ಕಾವೇರಿ ನೀರು ಹರಿಸುವುದನ್ನ ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಕೊಟ್ಟಿದೆ. ಇಂದು 12 ಗಂಟೆಗೆ ಕರವೇ ನಾರಯಣಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

Advertisement
Advertisement

ಇನ್ನು ಮತ್ತೊಂದೆಡೆ ಪ್ರತಿಭಟನೆ ರ್ಯಾಲಿ ತಡೆಯಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ. ಕರ್ನಾಟಕ ಮತ್ತು ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರತರವಾದ ಬರಗಾಲವಿದೆ. ತಮಿಳುನಾಡಿಗೆ ಮತ್ತೆ ಹದಿನೈದು ದಿನಗಳ ಕಾಲ 5,000 ಕ್ಯೂಸೆಕ್ಸ್ ನೀರು ಹರಿಸಲು ಆದೇಶ ಮಾಡಿರೋದು ಅನ್ಯಾಯ. ಹಳೇ ಮೈಸೂರಿನ ಭಾಗದ ಜನರಿಗೆ ವಿಷ ಉಣಿಸುವ ಆದೇಶವಾಗಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಇದನ್ನು ಪಾಲಿಸಬಾರದು. ಕರ್ನಾಟಕದ ರೈತರಿಗೆ ಮರಣ ಶಾಸನವಾಗಿರುವ ಈ ಆದೇಶ ವಾಪಾಸ್ ಪಡೆಯಬೇಕು. ಜನರಿಗೆ ಕುಡಿಯುವ ನೀರಿಗೆ ಆಸರೆಯಾಗಿರುವ ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಒತ್ತಾಯಿಸಿದ್ದಾರೆ. ಗಾಂಧಿನಗರದ ಕರವೇ ಕೇಂದ್ರ ಕಚೇರಿ ಮುಂಭಾಗದಿಂದ ವಿಧಾನಸೌಧದವರೆಗೆ ಕಾಲ್ನಡಿಗೆ ಮೂಲಕ ಜಾಥಾ ಮಾಡಿ ಬಳಿಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಳ್ಳಲಾಗಿದೆ.

ಬೀದಿಗಿಳಿದ ಕನ್ನಡ ಪರ ಸಂಘಟನೆಗಳು: ಚಾಮರಾಜನಗರದಲ್ಲಿ ಸುಪ್ರೀಂ ತೀರ್ಪು ಆಚೆ ಬರುತ್ತಿದ್ದಂತೆ ಕನ್ನಡ ಪರ ಸಂಘಟನೆಗಳು ಬೀದಿಗಿಳಿದಿವೆ. ಕೈಯಲ್ಲಿ ಖಾಲಿ ಮಡಕೆ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸುತ್ತಿವೆ. ಕನ್ನಡ ಪರ ಹೋರಾಟಗಾರರು ಸುಪ್ರೀಂ ಆದೇಶದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೈಯಲ್ಲಿ ಮಡಿಕೆ ಹಿಡಿದು ಭುವನೇಶ್ವರಿ ವೃತ್ತದ ವರೆಗೆ ಕಾಲ್ನಡಿಗೆ ಹೊರಟಿದ್ದಾರೆ. ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಪ್ರತಿ ಭಾರಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Advertisement

ಮಂಡ್ಯದಲ್ಲಿ ಮಹಿಳಾ ಹೋರಾಟಗಾರ್ತಿಯರು ಸುಪ್ರೀಂಕೋರ್ಟ್​ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಮರಣ ಶಾಸನ ಎಂದು ಕಣ್ಣೀರಿಟ್ಟಿದ್ದಾರೆ. ರಾಜ್ಯದ ಎಲ್ಲಾ ಸಂಸದರು ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಇನ್ನು ಮೈಸೂರಿನ ಬಸವೇಶ್ವರ ವೃತ್ತದ ಬಳಿ ರೈತ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ನಗರದ ಬಸವೇಶ್ವರ ವೃತ್ತದಿಂದ ಕಾಡಾ ಕಚೇರಿವರೆಗೂ ಮೆರವಣಿಗೆ ತೆರಳಿ ಕಾಡಾ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. ಮೈಸೂರು ಜಿಲ್ಲೆಯ ವಿವಿಧ ಭಾಗದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚೀನಾವನ್ನು ಸೈಡ್‌ಲೈನ್‌ ಮಾಡಿದ ಯುಎಸ್‌ | ಯುಎಸ್‌ನ ವಾಲ್‌ಮಾರ್ಟ್‌ಗೆ ಭಾರತದಿಂದ ಚಿಲ್ಲರೆ ವಸ್ತುಗಳ ರಫ್ತು | ಈ ವರ್ಷ ವಾಲ್‌ಮಾರ್ಟ್‌ ಆಮದು ಮಾಡಿಕೊಂಡ ವಸ್ತು ಎಷ್ಟು..? |
December 1, 2023
2:10 PM
by: The Rural Mirror ಸುದ್ದಿಜಾಲ
ಲೆಮನ್​ ಗ್ರಾಸ್​ ಬೆಳೆಯ ಮೂಲಕ ಬದುಕು ಬದಲಾಯಿಸಿದ ಕುಟುಂಬ | ನಕ್ಸಲ್‌ ಪೀಡಿತ ಪ್ರದೇಶದ ರೈತ ದಂಪತಿಯ ಯಶೋಗಾಥೆ
December 1, 2023
1:25 PM
by: The Rural Mirror ಸುದ್ದಿಜಾಲ
ತುರಿಗಜ್ಜಿ (ಸ್ಕೇಬಿಸ್) ಎಂದರೇನು? | ಹೋಮಿಯೋಪತಿಯಲ್ಲಿದೆ ಪರಿಣಾಮಕಾರಿ ಚಿಕಿತ್ಸೆ |
December 1, 2023
12:55 PM
by: The Rural Mirror ಸುದ್ದಿಜಾಲ
ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |
December 1, 2023
12:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror