ಸುಪ್ರೀಮ್ ಕೋರ್ಟ್ ರಾಜ್ಯದ ರೈತರ ಪಾಲಿಗೆ ಮರಣ ಶಾಸನ ಬರೆಯಲು ಹೊರಟಿದೆ. ರಾಜ್ಯದಲ್ಲಿ ನೀರು ಇಲ್ಲಾ ಅಂದ್ರು, ತಮಿಳುನಾಡಿಗೆನಿಂದ ನೀರು ಬಿಡಲೇ ಬೇಕು ಎಂದು ಆದೇಶ ನೀಡಿದೆ. ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಮತ್ತೆ ಸುಪ್ರೀಂ ಕೋರ್ಟ್ ಆದೇಶ ಕೊಟ್ಟಿದೆ.
ಈ ಹಿನ್ನೆಲೆ ಬೆಂಗಳೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ. . ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯಲಿದೆ. ಹಾಗೂ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಕೆಆಸ್ಎಸ್ ಪಕ್ಷ ಕರೆ ಕೊಟ್ಟಿದೆ. ಮಂಡ್ಯದ ಸಂಜಯ್ ಸರ್ಕಲ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಕಾವೇರಿಗಾಗಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರವೇ ಅಧ್ಯಕ್ಷ ನಾರಾಯಣಗೌಡ ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಬಾರದು. ಕಾವೇರಿ ನೀರು ಹರಿಸುವುದನ್ನ ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಕೊಟ್ಟಿದೆ. ಇಂದು 12 ಗಂಟೆಗೆ ಕರವೇ ನಾರಯಣಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ಇನ್ನು ಮತ್ತೊಂದೆಡೆ ಪ್ರತಿಭಟನೆ ರ್ಯಾಲಿ ತಡೆಯಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ. ಕರ್ನಾಟಕ ಮತ್ತು ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರತರವಾದ ಬರಗಾಲವಿದೆ. ತಮಿಳುನಾಡಿಗೆ ಮತ್ತೆ ಹದಿನೈದು ದಿನಗಳ ಕಾಲ 5,000 ಕ್ಯೂಸೆಕ್ಸ್ ನೀರು ಹರಿಸಲು ಆದೇಶ ಮಾಡಿರೋದು ಅನ್ಯಾಯ. ಹಳೇ ಮೈಸೂರಿನ ಭಾಗದ ಜನರಿಗೆ ವಿಷ ಉಣಿಸುವ ಆದೇಶವಾಗಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಇದನ್ನು ಪಾಲಿಸಬಾರದು. ಕರ್ನಾಟಕದ ರೈತರಿಗೆ ಮರಣ ಶಾಸನವಾಗಿರುವ ಈ ಆದೇಶ ವಾಪಾಸ್ ಪಡೆಯಬೇಕು. ಜನರಿಗೆ ಕುಡಿಯುವ ನೀರಿಗೆ ಆಸರೆಯಾಗಿರುವ ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಒತ್ತಾಯಿಸಿದ್ದಾರೆ. ಗಾಂಧಿನಗರದ ಕರವೇ ಕೇಂದ್ರ ಕಚೇರಿ ಮುಂಭಾಗದಿಂದ ವಿಧಾನಸೌಧದವರೆಗೆ ಕಾಲ್ನಡಿಗೆ ಮೂಲಕ ಜಾಥಾ ಮಾಡಿ ಬಳಿಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಳ್ಳಲಾಗಿದೆ.
ಬೀದಿಗಿಳಿದ ಕನ್ನಡ ಪರ ಸಂಘಟನೆಗಳು: ಚಾಮರಾಜನಗರದಲ್ಲಿ ಸುಪ್ರೀಂ ತೀರ್ಪು ಆಚೆ ಬರುತ್ತಿದ್ದಂತೆ ಕನ್ನಡ ಪರ ಸಂಘಟನೆಗಳು ಬೀದಿಗಿಳಿದಿವೆ. ಕೈಯಲ್ಲಿ ಖಾಲಿ ಮಡಕೆ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸುತ್ತಿವೆ. ಕನ್ನಡ ಪರ ಹೋರಾಟಗಾರರು ಸುಪ್ರೀಂ ಆದೇಶದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೈಯಲ್ಲಿ ಮಡಿಕೆ ಹಿಡಿದು ಭುವನೇಶ್ವರಿ ವೃತ್ತದ ವರೆಗೆ ಕಾಲ್ನಡಿಗೆ ಹೊರಟಿದ್ದಾರೆ. ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಪ್ರತಿ ಭಾರಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಮಂಡ್ಯದಲ್ಲಿ ಮಹಿಳಾ ಹೋರಾಟಗಾರ್ತಿಯರು ಸುಪ್ರೀಂಕೋರ್ಟ್ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಮರಣ ಶಾಸನ ಎಂದು ಕಣ್ಣೀರಿಟ್ಟಿದ್ದಾರೆ. ರಾಜ್ಯದ ಎಲ್ಲಾ ಸಂಸದರು ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಇನ್ನು ಮೈಸೂರಿನ ಬಸವೇಶ್ವರ ವೃತ್ತದ ಬಳಿ ರೈತ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ನಗರದ ಬಸವೇಶ್ವರ ವೃತ್ತದಿಂದ ಕಾಡಾ ಕಚೇರಿವರೆಗೂ ಮೆರವಣಿಗೆ ತೆರಳಿ ಕಾಡಾ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. ಮೈಸೂರು ಜಿಲ್ಲೆಯ ವಿವಿಧ ಭಾಗದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…