ಸುರತ್ಕಲ್ ನ ಜಂಕ್ಷನ್ ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ (MCC) ಅನುಮೋದಿಸಿದೆ.
Advertisement
ನೂತನವಾಗಿ ಆಯ್ಕೆಯಾದ ಮೇಯರ್ ಜಯಾನಂದ ಅಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ನಡಾವಳಿಗಳನ್ನು ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುಮೋದಿಸಲಾಗುವುದು. ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅಕ್ಟೋಬರ್ 30, 2021 ರಂದು ನಡೆದ ಕೌನ್ಸಿಲ್ ಸಭೆಯಲ್ಲಿ, ಈ ಪ್ರಸ್ತಾಪವನ್ನು ಸ್ಥಾಯಿ ಸಮಿತಿಗೆ ಕಳುಹಿಸಲಾಗಿತ್ತು.
Advertisement
ಫೆಬ್ರವರಿ 15 ರಂದು ಸ್ಥಾಯಿ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದ್ದರು ಮತ್ತು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಕೌನ್ಸಿಲ್ ಗೆ ಶಿಫಾರಸ್ಸು ಮಾಡಲು ನಿರ್ಧರಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement