ಮಹಿಳೆಯರು ಯಾವುದೇ ಕ್ಷೇತ್ರವಾದರೂ ಸೈ. ತಮ್ಮ ಸಾಮರ್ಥ್ಯವನ್ನು ತೋರಿಸಲು ಸಿದ್ಧ. ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಶ್ರೀಮತಿ ಸುರೇಖಾ ಯಾದವ್, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದು ಟ್ವೀಟ್ ಮಾಡಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗುವ ಮೂಲಕ ಸುರೇಖಾ ಯಾದವ್ ತಮ್ಮ ಕೇಂದ್ರ ರೈಲ್ವೆಯ ಹಿರಿಮೆಗೆ ಮತ್ತೊಂದು ಗರಿಯನ್ನು ಮೂಡಿಸಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಹೇಳಿದೆ.
ವೇಗದ ರೈಲು, ಸುಧಾರಿತ ತಂತ್ರಜ್ಞಾನ: ಸುರೇಖಾ ಯಾದವ್
ಅತ್ಯಾಧುನಿಕ ವಂದೇ ಭಾರತ್ ರೈಲು ಚಾಲನೆಯ ಮೊದಲ ಅನುಭವದ ಬಗ್ಗೆ ಸುರೇಖಾ ಯಾದವ್ ಅವರನ್ನು ಕೇಳಿದಾಗ, “ವಂದೇ ಭಾರತ್ ವೇಗದ ರೈಲು, ಸುಧಾರಿತ ತಂತ್ರಜ್ಞಾನವನ್ನು ಹೊಂದಿದೆ. ಆದ್ದರಿಂದ ಸಾಂಪ್ರದಾಯಿಕ ರೈಲುಗಳಿಗೆ ಹೋಲಿಸಿದರೆ ಹೆಚ್ಚು ಜಾಗರೂಕತೆಯ ಅಗತ್ಯವಿದೆ. ವಂದೇ ಭಾರತ್ ರೈಲನ್ನು ಚಲಾಯಿಸಲು ನೀಡಿದ ಅವಕಾಶಕ್ಕಾಗಿ ಅವರು ಕೃತಜ್ಞತೆ” ಎಂದು ಹೇಳಿದ್ದಾರೆ.
ಯಾರು ಈ ಸುರೇಖಾ ಯಾದವ್?:
ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದವರಾಗಿರುವ ಸುರೇಖಾ ಯಾದವ್ ಅವರು 1988 ರಲ್ಲಿ ಭಾರತದ ಮೊದಲ ಮಹಿಳಾ ರೈಲು ಚಾಲಕರಾದರು. ಇಲಾಖೆಯಲ್ಲಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಗಾಗಿ ಈವರೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸುರೇಖಾ ಅವರು ಸೆಂಟ್ರಲ್ ರೈಲ್ವೆಗೆ ಸೇರುವ ಮೊದಲು ಎಲೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿದ್ದರು. ವಂದೇ ಭಾರತ್ ರೈಲಿನಲ್ಲಿ ಚಾಲಕರಾಗಿ ನಿಯೋಜನೆಗೊಳ್ಳುವ ಮೊದಲು, ಅವರು ಫೆಬ್ರವರಿ 2023 ರಲ್ಲಿ ರೈಲ್ವೇ ಇನ್ಸಿಟ್ಯೂಟ್ ವಡೋದರಾದಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…