ಕೊರೋನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ(65) ಬಲಿಯಾಗಿದ್ದಾರೆ. ಸೆ. 11ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂಗಡಿ ಅವರು ಕೊರೋನಾ ಸೋಂಕಿಗೆ ಬಲಿಯಾದ ಕರ್ನಾಟಕದ ಎರಡನೇ ಸಂಸದರು ಹಾಗೂ ದೇಶದ ಮೊದಲ ಕೇಂದ್ರ ಸಚಿವರಾಗಿದ್ದಾರೆ. ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನಲೆಯಲ್ಲಿ 12 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4ನೇ ಬಾರಿಗೆ ಆಯ್ಕೆಯಾಗಿದ್ದ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ನೇಮಕವಾಗಿದ್ದರು. ರೈಲ್ವೆ ಸಚಿವರಾದ ನಂತರ ಅವರು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದರು. ಲೋಕಸಭೆಯ ಅಧಿವೇಶನ ಆರಂಭವಾದ ಸಂದರ್ಭದಲ್ಲಿ ಅವರು ಕೊರೋನಾ ಟೆಸ್ಟ್ ಮಾಡಿಸಿದ್ದರು. ಆಗ ಪಾಸಿಟಿವ್ ಬಂದಿದೆ, ನಾನು ಆರೋಗ್ಯವಾಗಿದ್ದೇನೆ ಎಂದು ಟ್ವೀಟ್ ಕೂಡಾ ಮಾಡಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel