Advertisement
ಸುದ್ದಿಗಳು

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

Share

ಸುರುಳಿ ಪೆರಾಬೆಯ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವು ಈಚೆಗೆ ಶ್ರೀ ಕ್ಷೇತ್ರದ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಶ್ರೀನಿಧಿ ಅರ್ಚಕರಿಂದ ದೇವತಾ ಪ್ರಾರ್ಥನೆ ನೆರವೇರಿಸಲಾಯಿತು. ಸತೀಶ್ ಗೌಡ ಪುಂಜ ಅವರು ಸ್ವಾಗತಿಸಿದರು. ಬಳಿಕ ಟ್ರಸ್ಟ್ ಅಧ್ಯಕ್ಷ ಕೃಷ್ಣಕುಮಾರ್ ಅತ್ರಿಜಾಲ ಅವರು ಪ್ರಸ್ತಾವಿಕ ಭಾಷಣ ಮಾಡಿ ಭಜನಾ ಮಂಡಳಿಯ ಅಗತ್ಯತೆ ಮತ್ತು ಮಹತ್ವವನ್ನು ವಿವರಿಸಿದರು.

ಅತಿಥಿಗಳಾದ ರಾಧಾಕೃಷ್ಣ ಮನವಳಿಕೆ, ಸಂಜೀವ ರೈ ಪರಾರಿ ಹಾಗೂ ಕುಶಾಲಪ್ಪ ಗೌಡ ಸುರುಳಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಮಂಡಳಿಯನ್ನು ಉದ್ಘಾಟಿಸಿದರು.  ಭಜನಾ ಮಂಡಳಿ ಅಧ್ಯಕ್ಷರಾಗಿ  ದಾಮೋದರ ಗೌಡ ಮಾಯಿಲ್ಗ ಅವರು ಸಭಾಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಖಾಯಂ ಟ್ರಸ್ಟಿ ಸುರುಳಿ ರಾಮೋಹನ ರೈ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮವನ್ನು ಪ್ರದೀಪ್ ರೈ ಮನವಳಿಕೆ ಅವರು ನಿರೂಪಣೆ ಮಾಡಿದರು. ನಾರಾಯಣ ಆಚಾರ್ಯ ಮರವಂತಿಲ ಅವರು ಧನ್ಯವಾದ ಸಮರ್ಪಿಸಿದರು. ಭಜನಾ ಮಂಡಳಿಯ ಸ್ಥಾಪನೆಯಿಂದ ಸ್ಥಳೀಯ ಭಕ್ತರಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು.

The Bhajana Mandali at Suruli Sri Balasubrahmanya Swamy Temple in Perabe, Kadaba, was inaugurated on February 23, 2026. The event included prayers, lamp lighting, and participation of temple trustees and dignitaries, aiming to promote devotional activities among local devotees.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 days ago