ಧಾರವಾಡ ಕೃಷಿ ಮೇಳ | ಸುಸ್ಥಿರ ಕೃಷಿಗೆ ಒತ್ತು ನೀಡಬೇಕು

September 16, 2025
6:51 AM

ಕೃಷಿ ಕ್ರಾಂತಿ, ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಮಾಡುವ ಕಡೆಗೆ ಕೃಷಿ ವಿಜ್ಞಾನಿಗಳು ಹೆಚ್ಚಿನ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಕೈಪಿಡಿ ಬಿಡುಗಡೆಗೊಳಿಸಿದರು. ಇದೇ ವೇಳೆ ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.  ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ, ರಫ್ತು ಮಾಡುವ ಕಡೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಸಂಶೋಧನೆ ನಡೆಸುವ ಅಗತ್ಯವಿದೆ ಎಂದರು. ರಾಜ್ಯ ಹಾಲಿನ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರವನ್ನು ಹಿಂದಿಕ್ಕಿ, ಮೊದಲ ಸ್ಥಾನಕ್ಕೆ ಬರುವುದರಲ್ಲಿ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲೂ ಅಪಾರ ಪ್ರಗತಿ ಸಾಧಿಸಿದ್ದೇವೆ. ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದು, ಇದರಿಂದ ಜನರು ಸಿರಿಧಾನ್ಯಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಹೇಳಿದರು. ಕೃಷಿ ವಿಶ್ವವಿದ್ಯಾಲಯಗಳು ಪ್ರಯೋಗಾಲಯದಿಂದ ಭೂಮಿಗೆ ಹಾಗೂ ಭೂಮಿಯಿಂದ ಪ್ರಯೋಗಾಲಯದ ಕಡೆಗೆ ಹೆಚ್ಚಿನ ಗಮನ ಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಒತ್ತು ನೀಡಬೇಕು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror