ಕೃಷಿ ಕ್ರಾಂತಿ, ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಮಾಡುವ ಕಡೆಗೆ ಕೃಷಿ ವಿಜ್ಞಾನಿಗಳು ಹೆಚ್ಚಿನ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಕೈಪಿಡಿ ಬಿಡುಗಡೆಗೊಳಿಸಿದರು. ಇದೇ ವೇಳೆ ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ, ರಫ್ತು ಮಾಡುವ ಕಡೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಸಂಶೋಧನೆ ನಡೆಸುವ ಅಗತ್ಯವಿದೆ ಎಂದರು. ರಾಜ್ಯ ಹಾಲಿನ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರವನ್ನು ಹಿಂದಿಕ್ಕಿ, ಮೊದಲ ಸ್ಥಾನಕ್ಕೆ ಬರುವುದರಲ್ಲಿ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲೂ ಅಪಾರ ಪ್ರಗತಿ ಸಾಧಿಸಿದ್ದೇವೆ. ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದು, ಇದರಿಂದ ಜನರು ಸಿರಿಧಾನ್ಯಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಹೇಳಿದರು. ಕೃಷಿ ವಿಶ್ವವಿದ್ಯಾಲಯಗಳು ಪ್ರಯೋಗಾಲಯದಿಂದ ಭೂಮಿಗೆ ಹಾಗೂ ಭೂಮಿಯಿಂದ ಪ್ರಯೋಗಾಲಯದ ಕಡೆಗೆ ಹೆಚ್ಚಿನ ಗಮನ ಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಒತ್ತು ನೀಡಬೇಕು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…