Advertisement
MIRROR FOCUS

ಸ್ವಚ್ಛತೆಗೆ ಆದ್ಯತೆ | ಗುತ್ತಿಗಾರಿನಲ್ಲಿ ಸಿಸಿಟಿವಿ ಅಳವಡಿಕೆಗೆ ಮನವಿ | ತ್ಯಾಜ್ಯ ಎಸೆದವರ ವಿರುದ್ಧ ಕ್ರಮಕ್ಕೆ ಜನರಿಂದಲೇ ಮನವಿ…! |

Share

ಸ್ವಚ್ಛತೆಗಾಗಿ ಹಾಗೂ ಗ್ರಾಮದ ಸುರಕ್ಷತೆಗಾಗಿ ಜನರೇ ಸಿಸಿಟಿವಿ ಅಳವಡಿಕೆ ಮಾಡಲು ಗ್ರಾಮಪಂಚಾಯತ್‌ಗೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ, ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಜನರು ಒತ್ತಾಯಿಸಿದ್ದಾರೆ…!. ಇಂತಹದ್ದೊಂದು ಮನವಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದಿದೆ.

ದೇಶದೆಲ್ಲೆಡೆ ಸ್ವಚ್ಛಭಾರತದ ( SwachchBharath) ಅಭಿಯಾನ ಸದ್ದು ಮಾಡುತ್ತಲೇ ಇದೆ. ಗ್ರಾಮ ಮಟ್ಟದಲ್ಲೂ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಹಾಗಿದ್ದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ, ಸ್ವಚ್ಛತಾ ಜಾಗೃತಿ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಈ ನಡುವೆಯೇ ಹಲವು ಕಡೆಗಳಲ್ಲಿ ಜನರು ಸ್ವಚ್ಛತಾ ಅಭಿಯಾನದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಲೇ ಇದ್ದಾರೆ. ಹೀಗೆ ಜಾಗೃತಿ ಮೂಡಿಸುವ ಗ್ರಾಮಗಳಲ್ಲಿ ಗುತ್ತಿಗಾರು ಕೂಡಾ ಒಂದು.ಕಳೆದ 15 ವಾರಗಳಿಂದ ನಿರಂತರವಾಗಿ ಪ್ರತೀ ವಾರ ಸ್ವಚ್ಛತಾ ಅಭಿಯಾನ ಹಾಗೂ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ಅಭಿಯಾನದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟ, ವರ್ತಕ ಸಂಘ, ಗ್ರಾಮ ಪಂಚಾಯತ್‌ ಹಾಗೂ ಇತರ ಸಂಘಸಂಸ್ಥೆಗಳು ಕೈಜೋಡಿಸಿದ್ದವು.

ಪ್ರತೀ ವಾರದ ಸ್ವಚ್ಛತಾ ಕಾರ್ಯದ ನಂತರವೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಹೀಗಾಗಿ ಇದೀಗ ಗುತ್ತಿಗಾರು ವರ್ತಕ ಸಂಘವು ಗ್ರಾಮದ ಸುರಕ್ಷತೆ ಹಾಗೂ ಸ್ವಚ್ಛತಾ ಕಾರ್ಯದ ಉದ್ದೇಶದಿಂದ ಸಿಸಿಟಿವಿ ಅಳವಡಿಕೆ ಮಾಡಲು ಗ್ರಾಮ ಪಂಚಾಯತ್‌ ಗೆ ಮನವಿ ಮಾಡಿದೆ. ಇದರ ಜೊತೆಗೆ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಮನವಿಯಲ್ಲಿ ತಿಳಿಸಿದೆ.

Guthigar Vartaka Sangha has requested the Gram Panchayat to install CCTV for the purpose of safety and cleanliness of the village.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

16 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago