ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಾಳೆಯಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2025ಆಂದೋಲನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಂದೋಲನದಲ್ಲಿ ಪಾಲ್ಗೊಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ತಿಳಿಸಿದ್ದಾರೆ.
ಸೇವಾ ಪಾಕ್ಷಿಕದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಬಿಜೆಪಿ ಘಟಕ ಜಿಲ್ಲಾ ಮತ್ತು ಮಂಡಲ ಗಳಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಕೈಗೊಂಡಿದೆ. ಬಳ್ಳಾರಿ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನಾಳೆಯಿಂದ ಅಕ್ಟೋಬರ್ 2 ರವರೆಗೆ ‘ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆ ಮತ್ತು ಶುಚಿತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

