ದಾವಣಗೆರೆಯಲ್ಲಿ ಅಯೋಜಿಸಲಾಗಿರುವ ಸ್ವದೇಶಿ ಮೇಳಕ್ಕೆ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಚಾಲನೆ ನೀಡಿದರು. ದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಜನರಿಗೆ ನೂತನ ಉತ್ಪನ್ನಗಳ ಕುರಿತು ಪರಿಚಯ ಮಾಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ.
Advertisement
ಮೇಳದಲ್ಲಿ ವಿವಿಧ ಮಳಿಗೆಗಳನ್ನು ಸ್ಥಾಪಿಸಿದ್ದು, ಜನರಿಗೆ ಹೊಸ ಉತ್ಪನ್ನಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮ ಆಯೋಜಕ ವೀರೇಶ್ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟ ಮಾಡಲು ಮತ್ತು ವಿವಿಧ ಪ್ರದೇಶಗಳ ಆಹಾರ ಪದ್ಧತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಮೇಳ ಅಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದರು. ಮಳಿಗೆ ಮಾಲೀಕ ಮಹೇಶ್ ಶೆಟ್ಟಿ, ಕರಾವಳಿ ಭಾಗದ ಆಹಾರ ಶೈಲಿಯನ್ನು ಜನರಿಗೆ ಪರಿಚಯಿಸುತ್ತಿದ್ದು, ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್, ಶ್ರೀಕುಮಾರ್ ಸ್ವಾಮಿ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement