ಮಹಿಳೆಯರ ಸ್ವಾವಲಂಬನೆಯ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ದೇಶದ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿಯಲ್ಲಿ ತಲಾ 1 ಲಕ್ಷ ರೂ ನಂತೆ 75 ಕೋಟಿ ಅನುದಾನ ನೀಡಲು ಮುಂದಾಗಿದೆ.
ಪ್ರತಿ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮಿಷನ್ ಅಡಿಯಲ್ಲಿ ನೋಂದಣಿಗಾಗಿ ಬಂಡವಾಳ ನಿಧಿ ಪಡೆದಂತಹವರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಅಮೃತ ಸ್ವಸಹಾಯ ಸಂಘದ ಮುಖ್ಯ ಉದ್ದೇಶವೆಂದರೆ ಈ ಯೋಜನೆಯಡಿಯಲಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸುವುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel