ಪ್ರಾಣಿ ಪ್ರಿಯರಿಗೆ ಸಿಹಿ ಸುದ್ದಿ | 5 ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ | ಕುನೋದಲ್ಲಿ ಚೀತಾಗಳ ಸಂಖ್ಯೆ 26ಕ್ಕೆ ಏರಿಕೆ

March 11, 2024
12:58 PM

ಇಷ್ಟು ದಿನ ಮಧ್ಯಪ್ರದೇಶದ(Madyapradesh) ಕುನೋ ರಾಷ್ಟ್ರೀಯ ಉದ್ಯಾನಕ್ಕೆ ದಕ್ಷಿಣ ಆಫ್ರಿಕಾದಿಂದ(South Africa) ತರಿಸಲಾಗಿದ್ದ ಚೀತಾಗಳು ಒಂದರ ಮೇಲೊಂದರಂತೆ ಸಾವನ್ನಪ್ಪುತ್ತಿವೆ ಎಂಬ ದುಖಃದ ವಿಷಯಗಳೇ ಕೇಳಿಬರುತ್ತಿತ್ತು. ಆದರೆ ಈಗ ಪ್ರಾಣಿ ಪ್ರಿಯರಿಗೆ ಸಂತಸದ ಸುದ್ದಿಯೊಂದು ಬಂದಿದೆ.  5 ವರ್ಷದ ಚೀತಾ (African Cheetah) 5 ಮರಿಗಳಿಗೆ ಜನ್ಮ ನೀಡಿದ್ದು, ಮಧ್ಯಪ್ರದೇಶದ(Madyapradesh) ಕುನೋ ರಾಷ್ಟ್ರೀಯ ಉದ್ಯಾನದಲ್ಲಿ(Kuno National Park) ಒಟ್ಟು ಚೀತಾಗಳ(Cheetah) ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
Advertisement

ಇದರಲ್ಲಿ ಭಾರತದಲ್ಲಿ(India) ಜನಿಸಿದ 13 ಮರಿಗಳೂ ಸೇರಿವೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ (Bhupendra Yadav) ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ, ಸುಮಾರು 5 ವರ್ಷ ಪ್ರಾಯದ ಹೆಣ್ಣು ಚೀತಾ ಗಾಮಿನಿ ಭಾನುವಾರ 5 ಮರಿಗಳಿಗೆ (Cheetah Cubs) ಜನ್ಮ ನೀಡಿದ್ದು, ಭಾರತದಲ್ಲಿ ಜನಿಸಿದ ಚೀತಾ ಮರಿಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದೆ, ಈ ಚೀತಾವನ್ನು ದಕ್ಷಿಣ ಆಫ್ರಿಕಾದ ತ್ಸ್ವಾಲು ಕಲಹರಿ ಮೀಸಲು ಪ್ರದೇಶದಿಂದ ತರಲಾಗಿತ್ತು ಎಂದು ತಿಳಿಸಿದ್ದಾರೆ.

Advertisement

ಇಲ್ಲಿನ ಅರಣ್ಯಾಧಿಕಾರಿಗಳು (Forest Officers), ಪಶು ವೈದ್ಯರು ಹಾಗೂ ರಕ್ಷಣಾ ಸಿಬ್ಬಂದಿ ತಂಡವು ಚೀತಾಗಳಿಗೆ ಒತ್ತಡ ರಹಿತ ವಾತಾವರಣವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದು ಚೀತಾಗಳ ಜನನ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಇದೀಗ ಕುನೋದಲ್ಲಿ ಒಟ್ಟು ಚೀತಾಗಳ ಸಂಖ್ಯೆ 26 ಆಗಿದೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಜ್ವಾಲಾ ಎಂಬ ಚೀತಾ ಕಳೆದ ಜನವರಿ 20 ರಂದು ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಆಶಾ ಹೆಸರಿನ ಮತ್ತೊಂದು ಚೀತಾ ಅದೇ ತಿಂಗಳ ಆರಂಭದಲ್ಲಿ 3 ಮರಿಗಳಿಗೆ ಜನ್ಮ ನೀಡಿತು.

1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ಘೋಷಿಸಲಾಗಿತ್ತು. ಆ ನಂತರ ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು (Wildlife) ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ಚೀತಾಗಳನ್ನು ಎರಡು ಬ್ಯಾಚ್‌ಗಳಲ್ಲಿ ಆಮದು ಮಾಡಿಕೊಳ್ಳಲಾಯಿತು. 2022 ರಲ್ಲಿ ನಮೀಬಿಯಾದಿಂದ ಮೊದಲ ಬ್ಯಾಚ್‌ ಅನ್ನು ಆಮದು ಮಾಡಿಕೊಳ್ಳಲಾಗಿತ್ತು. ಸೆ.17 ರಂದು ಪ್ರಧಾನಿ ಮೋದಿ (Narendra Modi) ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು.

Advertisement

ಆರಂಭದ ಒಂದು ವರ್ಷದ ಅವಧಿಯಲ್ಲಿ ಸುಮಾರು 10 ಚೀತಾಗಳು ಸಾವಿಗೀಡಾಗಿದ್ದವು. ಆದ್ರೆ ಪ್ರಸಕ್ತ ವರ್ಷದ ಮೊದಲ ಮೂರು ತಿಂಗಳಲ್ಲೇ 12 ಮರಿಗಳ ಜನನವಾಗಿದ್ದು, ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ವರ್ಷದಿಂದಲೇ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾ ಸಫಾರಿ ಆರಂಭಿಸುವ ಬಗ್ಗೆಯೂ ಅಧಿಕಾರಿಗಳು ಸುಳಿವು ನೀಡಿದ್ದಾರೆ.

  • ಅಂತರ್ಜಾಲ ಮಾಹಿತಿ

Among the cheetahs brought from South Africa to Kuno National Park of Madhya Pradesh, a 5-year-old African Cheetah gave birth to 5 cubs, and the total number of cheetahs in Kuno National Park of Madhya Pradesh has increased to 26.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಅರಣ್ಯದಿಂದ ಕೂಡಿದ ಗ್ರಾಮೀಣ ಭಾಗಕ್ಕೂ ನೀರು…! | ಕರಾವಳಿ ಜಿಲ್ಲೆಯ ಈಗಿನ ದೊಡ್ಡ ಯೋಜನೆ ಇದು | ಯಾಕೆ ಎಲ್ಲರೂ ಮೌನವಾಗಿದ್ದಾರೆ..? | ಈ ಕೊಳವೆಯಲ್ಲಿ ಹರಿಯುವುದು ನೀರೋ.. ಹಣವೋ..?
February 1, 2025
8:07 AM
by: ಮಹೇಶ್ ಪುಚ್ಚಪ್ಪಾಡಿ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror