ಉತ್ತರ ಕರ್ನಾಟಕದ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ | ಧಾರವಾಡಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು

July 29, 2024
1:46 PM

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತದೆ. ಹಣ್ಣು, ಸೊಪ್ಪು- ತರಕಾರಿ, ದವಸ, ಧಾನ್ಯ, ಬೇಳೆ ಕಾಳು ಮುಂತಾದ ಹೆಚ್ಚಿನ ಬೆಳೆಗಳು ಇಲ್ಲಿ ಆದಾಯ. ರಾಜ್ಯದ ಅಲ್ಲದೆ ದೇಶದ ಇತರ ಭಾಗಗಳಿಗೂ ಇವುಗಳ ರಫ್ತು ನಡೆಯುತ್ತದೆ. ಅದಕ್ಕೆ ತಕ್ಕ ಮಾರುಕಟ್ಟೆ ವ್ಯವಸ್ಥೆಇದ್ದರೆ ರೈತರಿಗೆ ಇನ್ನು ಅನುಕೂಲ. ಅದರಲ್ಲೂ ಉತ್ತರ ಕರ್ನಾಟಕದ ಬಹುಭಾಗದಲ್ಲಿ ಮಾವು ಬೆಳೆ ಬೆಳೆಯಲಾಗುತ್ತದೆ. ಇದೀಗ  ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಂತಸ ಸುದ್ದಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಅನುಮತಿ ನೀಡಿ ಅನುದಾನ ಮಂಜೂರು ಮಾಡಿದೆ. ಇದು ಈ ಭಾಗದಲ್ಲಿ ಮಾವು ಕೃಷಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

Advertisement
Advertisement
Advertisement

ಇತ್ತೀಚೆಗೆ ಹವಾಮಾನ ಬದಲಾವಣೆಯಿಂದಾಗಿ ಸುಸ್ಥಿರ ಮಾರುಕಟ್ಟೆ ಇಲ್ಲದೇ ಮಾವು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಎಷ್ಟೋ ರೈತರು ಇರುವ ತೋಟಗಳನ್ನೇ ತೆರವುಗೊಳಿಸುವ ನಿರ್ಧಾರಕ್ಕೂ ಬಂದಿದ್ದರು. ಆದರೆ ಧಾರವಾಡ ಆಫೂಸ್ ಮಾವಿಗೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲು ಕೇಂದ್ರದ ನಿರ್ಧಾರ ಪೂರಕವಾಗಲಿದೆ. ಉತ್ತರ ಕರ್ನಾಟಕದಲ್ಲಿ ವಿವಿಧ ಮಾವಿನ ತಳಿಗಳ ಬೆಳೆಯುವ ಅಗತ್ಯತೆ ಇದ್ದು, ಮಾವು ತಳಿಗಳ ಅಭಿವೃದ್ಧಿ, ಸಂಶೋಧನೆ, ಪ್ರಾತ್ಯಕ್ಷಿಕೆ, ರೈತರಿಗೆ ತರಬೇತಿ, ಮಾವಿನ ಹಣ್ಣು ಮತ್ತು ಮಾವಿನ ಕಾಯಿ ರಫ್ತು ವ್ಯವಸ್ಥೆ ಒದಗಿಸುವ ಕೆಲಸಗಳನ್ನು ಈ ಕೇಂದ್ರ ಮಾಡಲಿದೆ.

Advertisement

ಧಾರವಾಡ ಪಕ್ಕದ ಜಿಲ್ಲೆಗಳಿಗೂ ಅನುಕೂಲ: ಧಾರವಾಡ ಜಿಲ್ಲೆಯಲ್ಲಿ 8,400 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ ಇದೆ. ಅಕ್ಕಪಕ್ಕದ ಜಿಲ್ಲೆಗಳಾಗಿರುವ ಕೊಪ್ಪಳ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ ಮತ್ತು ಗದಗ ಭಾಗದಲ್ಲಿ ಮಾವಿನ ತೋಟಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಅಂದಾಜು 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ತೋಟಗಳಿವೆ. ಹೀಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕರ್ನಾಟಕಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು ಮಾಡಿದೆ.  ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಧಾರವಾಡ ಜಿಲ್ಲೆಯಲ್ಲಿರುವ ಕುಂಭಾಪುರ ಫಾರ್ಮ್​ನಲ್ಲಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಒಟ್ಟು 7.5 ಕೋಟಿ ರೂಪಾಯಿ ಅನುದಾನ ಕೇಂದ್ರದಿಂದ ಮಂಜೂರಾಗಿದ್ದು, ಇನ್ನೆರಡು ತಿಂಗಳಿನಲ್ಲಿ ಕೇಂದ್ರ ಸ್ಥಾಪನೆಯ ಕಾರ್ಯಗಳು ಆರಂಭವಾಗಲಿವೆ.

“ಈ ಭಾಗದ ಮಾವು ರೈತರಿಗೆ ಅನುಕೂಲವಾಗಲಿ ಎಂದು ನಮ್ಮ ಇಲಾಖೆಯಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಇದಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಮಾವು ಅಭಿವೃದ್ಧಿ ಕೇಂದ್ರಕ್ಕೆ ಕೇಂದ್ರ ಅನುಮತಿ ನೀಡಿ, ಅನುದಾನ ಮಂಜೂರು ಮಾಡಿದೆ. ಮಾವು ಇಳುವರಿ ಹೆಚ್ಚಿಸಲು, ಸಂಶೋಧನೆ, ಕೋಲ್ಡ್ ಸ್ಟೋರೇಜ್, ಮಾರುಕಟ್ಟೆ ಸೌಲಭ್ಯ ಸೇರಿದಂತೆ ಇನ್ನಿತರೆ ಅನುಕೂಲಗಳನ್ನು ಬೆಳೆಗಾರರಿಗೆ ಈ ಕೇಂದ್ರದ ಮೂಲಕ ಒದಗಿಸಲಾಗುವುದು” ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣ್ಣವರ ಮಾಹಿತಿ ನೀಡಿದರು.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror