ಬೆಂಗಳೂರು | ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ

December 9, 2024
7:00 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನದ ಅಂಗವಾಗಿ ಆರೋಗ್ಯ ಸಿಬ್ಬಂದಿ ತಂಡ ಮನೆಮನೆಗೆ ಭೇಟಿ ನೀಡಿ, ಜನರಲ್ಲಿ ಅರಿವು ಮೂಡಿಸಲಿದೆ.  ಇದೇ ಸಂದರ್ಭದಲ್ಲಿ ತ್ವರಿತಗತಿಯಲ್ಲಿ ತಪಾಸಣೆ ನಡೆಸಲಾಗುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಸ್.ನಾಗೇಶ್ ತಿಳಿಸಿದ್ದಾರೆ. 

ಡಿಸೆಂಬರ್ 7 ರಿಂದ 2025 ರ ಮಾರ್ಚ್ 17  ರವರೆಗೆ  ಹಮ್ಮಿಕೊಂಡಿರುವ 100 ದಿನಗಳ ಪರಿಣಾಮಕಾರಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ. ಈ ಚಟುವಟಿಕೆಗಳಲ್ಲಿ ಸಮಾಜದ ದುರ್ಬಲ ಜನಸಂಖ್ಯೆಗಳಾದ ಮಧುಮೇಹಿಗಳು, ದೂಮಪಾನಿಗಳು, ವೃದ್ದರು, ಮದ್ಯವ್ಯಸನಿಗಳು, ಈ ಹಿಂದೆ ಕ್ಷಯರೋಗ ಚಿಕಿತ್ಸೆ ಪೂರ್ಣಗೊಳಿಸಿರುವವರು ಮತ್ತು ಕುಟುಂಬ ಸದಸ್ಯರು, ಹೆಚ್‌ಐವಿ ಸೋಂಕಿತರು ಹಾಗೂ ಇತರೆ ವಲಸೆ ಕಾರ್ಮಿಕರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿ ತಂಡಗಳು ಭೇಟಿನೀಡಿ ಕ್ಷಯರೋಗದ ಅರಿವು ಮೂಡಿಸುವುದರ ಜೊತೆಗೆ ತ್ವರಿತ ರೀತಿಯಲ್ಲಿ ತಪಾಸಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಸ್.ನಾಗೇಶ್ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror