ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಭಾಗದ ಕೆಲವು ಕಡೆ ಮಳೆಯಾದ ಬಗ್ಗೆ ವರದಿ ಇದೆ.
ಮಾರ್ಚ್ 17ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಬೇಸಿಗೆ ಮಳೆಯು ಆರಂಭವಾಗುವ ಲಕ್ಷಣಗಳಿವೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ, ಮಲೆನಾಡು ಭಾಗದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.