ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು.
ಮಳೆಯಿಂದಾಗಿರುವ ಅನಾಹುತಗಳಿಗೆ ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.