ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದ್ದಾರೆ.
ಬಿಟ್ಟಂಗಾಲದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು.ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಲ್ಲಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಯಾವುದೇ ಮಾಹಿತಿ ನೀಡದಿದ್ದಲ್ಲಿ ಸಮಸ್ಯೆ ಬಗೆ ಹರಿಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.