Advertisement
MIRROR FOCUS

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

Share
ರಾಜ್ಯದಲ್ಲಿ ಈ ಬಾರಿ ಮಳೆಯ ಕಾರಣದಿಂದ ಅಡಿಕೆ ಬೆಳೆಗಾರರು ಕೊಳೆರೋಗದಿಂದ ಸಂಕಷ್ಟ ಒಳಗಾಗಿದ್ದಾರೆ. ಈಗಾಗಲೇ ಕಳೆದ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ವರ್ಷವೂ ಅಂತ್ಯವಾಗಿದ್ದು, ತಕ್ಷಣವೇ ಹವಾಮಾನ ಆಧಾರಿತ ಬೆಳೆ ವಿಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.
ಈ ವರ್ಷದ ಮಳೆಯ ಕಾರಣದಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಅಡಿಕೆ ಬೆಳೆಗಾರರ ಸಂಘವು ನಡೆಸಿದ ಸರ್ವೆಯ ಪ್ರಕಾರ ಈ ಬಾರಿ ಕೃಷಿಕರಿಗೆ ಶೇ.50 ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಿದೆ. ಬೆಳೆಗಾರರು ಈಗ ಸಂಕಷ್ಟದಲ್ಲಿದ್ದಾರೆ.  ಶೇ.95 ರಷ್ಟು ಅಡಿಕೆ ಬೆಳೆಗಾರರು ಈ ಬಾರಿ ಕೊಳೆರೋಗದ ಸಂಕಷ್ಟ ಎದುರಿಸುತ್ತಿದ್ದಾರೆ. ಶೇ.85 ರಷ್ಟು ಕೃಷಿಕರಿಗೆ ಮಳೆಯ ಕಾರಣದಿಂದ ಕೊಳೆರೋಗ ತಡೆಗೆ ಬೋರ್ಡೋ ಸಿಂಪಡಣೆಗೆ ಸಾಧ್ಯವಾಗಿಲ್ಲ. ಈಗ ಕೊಳೆರೋಗ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಕೊಳೆರೋಗ ನಿಯಂತ್ರಣಕ್ಕೆ ಮೂರನೇ ಸುತ್ತಿನ ಔಷಧಿ ಸಿಂಪಡಣೆಗೂ ಪ್ರಯತ್ನ ನಡೆಯುತ್ತಿದೆ. ಕಳೆದ ವರ್ಷವೂ ಹಲವು ಕಡೆ ಇಳುವರಿಯ ಕೊರತೆಯೂ ಇತ್ತು. ಇದೀಗ ವ್ಯಾಪಕವಾದ ಕೊಳೆರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಈಗ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಬೆಳೆಗಾರರಿಗೆ ಆರ್ಥಿಕ ನೆರವು ಕೂಡಾ ಅಗತ್ಯ ಇದೆ. ಹೀಗಾಗಿ, ಕಳೆದ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಕಟ್ಟಿರುವ  ಬೆಳೆಗಾರರಿಗೆ ತಕ್ಷಣವೇ ಬೆಳೆ ವಿಮೆ ಪಾವತಿಗೆ ವ್ಯವಸ್ಥೆ ಮಾಡುವುದರ ಜೊತೆಗೆ ಬೆಳೆ ವಿಮೆ ಪಾವತಿಗೆ ಸಾಧ್ಯವಾಗದ ಅಡಿಕೆ ಬೆಳೆಗಾರರಿಗೆ ನಷ್ಟದ ಪರಿಹಾರ ಕ್ರಮವಾಗಿ ತಕ್ಷಣವೇ ಸರ್ಕಾರವು ಇಲಾಖೆಗಳ ಮೂಲಕ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘವು ಒತ್ತಾಯಿಸಿದೆ.
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ. ಈ ಹಂತಗಳನ್ನು ತಕ್ಷಣವೇ ಮಾಡಬೇಕಾಗಿದೆ. ಕಳೆದ ಒಂದೆರಡು ವರ್ಷಗಳಿಂದ ಅಕ್ಟೋಬರ್‌ ಅಂತ್ಯ ಅಥವಾ ನವೆಂಬರ್‌  ತಿಂಗಳಲ್ಲಿ ವಿಮೆ ಹಣ ಬಿಡುಗಡೆಯಾಗುತ್ತಿದೆ. ಇಲಾಖೆಗಳ  ಬಳಿ ಹವಾಮಾನದ ಡಾಟಾಗಳು ಇರುವುದರಿಂದ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳೆಗಾರರ ಸಂಘವು ಒತ್ತಾಯಿಸಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

18 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

19 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago