ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತುಮಕೂರು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.……… ಮುಂದೆ ಓದಿ…….
ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕುಡಿಯುವ ನೀರು ಮತ್ತು ಮೇವಿನ ಸ್ಥಿತಿ-ಗತಿ ಕುರಿತು ಸಭೆ ನಡೆಸಿದ ಅವರು, ಮುಂದಿನ 6 ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ, ಅಗತ್ಯವಿರುವ ಕಡೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ ಮಾತನಾಡಿ, ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ವಿನಿಯೋಗಿಸಲು ಜಿಲ್ಲಾ ಪಂಚಾಯತಿಯಲ್ಲಿ 5 ಕೋಟಿ ರೂಪಾಯಿಗಳ ಅನುದಾನ ಲಭ್ಯವಿದೆ. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ತಾಲೂಕು ಕಾರ್ಯಪಡೆ ಸಭೆಯಲ್ಲಿ ಅನುಮೋದನೆ ಪಡೆದು, ಗ್ರಾಮಗಳ ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಗೆ ಸಲ್ಲಿಸಿದರೆ, ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.