ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

February 19, 2025
7:27 AM

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತುಮಕೂರು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.……… ಮುಂದೆ ಓದಿ…….

ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕುಡಿಯುವ ನೀರು ಮತ್ತು ಮೇವಿನ ಸ್ಥಿತಿ-ಗತಿ ಕುರಿತು ಸಭೆ ನಡೆಸಿದ ಅವರು, ಮುಂದಿನ 6 ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ, ಅಗತ್ಯವಿರುವ ಕಡೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ ಮಾತನಾಡಿ, ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ವಿನಿಯೋಗಿಸಲು ಜಿಲ್ಲಾ ಪಂಚಾಯತಿಯಲ್ಲಿ 5 ಕೋಟಿ ರೂಪಾಯಿಗಳ ಅನುದಾನ ಲಭ್ಯವಿದೆ. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ತಾಲೂಕು ಕಾರ್ಯಪಡೆ ಸಭೆಯಲ್ಲಿ ಅನುಮೋದನೆ ಪಡೆದು, ಗ್ರಾಮಗಳ ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಗೆ  ಸಲ್ಲಿಸಿದರೆ, ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ
September 28, 2026
11:19 AM
by: ದ ರೂರಲ್ ಮಿರರ್.ಕಾಂ
ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು
September 28, 2026
10:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror