ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

October 17, 2024
7:37 PM

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ ತೀರ್ಥೋದ್ಭವ ಜರುಗಿದೆ.  ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕುಂಡಿಕೆಯಲ್ಲಿ ಕಾವೇರಿ ತೀರ್ಥಸ್ವರೂಪಿಣಿಯಾದ ಸಂದರ್ಭವನ್ನು ಸಹಸ್ರಾರು ಮಂದಿ ಈ ಕ್ಷಣವನ್ನು ಕಣ್ತುಂಬಿಕೊಂಡರು. 

ಪುಟ್ಟ ಕುಂಡಿಕೆಯಲ್ಲಿ ಕಾವೇರಿ ನದಿ ನೀರು, ಉಕ್ಕಿದ ಸಂದರ್ಭದಲ್ಲಿ ಯಾತ್ರಿಗಳು ಭಾವಪರವಶರಾದರು, ಕ್ಷೇತ್ರದ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಅರ್ಚಕರು ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿತು. ತಲಕಾವೇರಿಯಲ್ಲಿ ತೀರ್ಥೋದ್ಭವದ ಪುಣ್ಯ ಕ್ಷಣಕ್ಕಾಗಿ ಕಾಯುತ್ತಿದ್ದ ಭಕ್ತರ ಮೇಲೆ ಅರ್ಚಕರು ಕಾವೇರಿ ತೀರ್ಥವನ್ನು ಪ್ರೋಕ್ಷಿಸಿದರು.

ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿತ್ತು, ತಲಕಾವೇರಿಯಲ್ಲಿ ಯಾತ್ರಾರ್ಥಿಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಇನ್ನು ಒಂದು ತಿಂಗಳ ಕಾಲ ತಲಕಾವೇರಿ – ಭಾಗಮಂಡಲದಲ್ಲಿ ಕಾವೇರಿ ಜಾತ್ರೆಯ ಸಂಭ್ರಮ ಕಂಡುಬರಲಿದೆ.

ಈ ವರ್ಷ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರಗಳಲ್ಲಿ ಕಾವೇರಿ ತೀರ್ಥ ಸಂಗ್ರಹಣೆಗಾಗಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿಗಳನ್ನು ಸರ್ಕಾರ ನಿಷೇಧ ಮಾಡಿದೆ,   ಭಾಗಮಂಡಲದಿಂದ ತಲಕಾವೇರಿಗೆ ದಿನವಿಡೀ ಯಾತ್ರಿಗಳು ಸಾಗರೋಪಾದಿಯಲ್ಲಿ ಕಾವೇರಿ ತೀರ್ಥ ಪಡೆಯಲು ತೆರಳುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror