ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ ತೀರ್ಥೋದ್ಭವ ಜರುಗಿದೆ. ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕುಂಡಿಕೆಯಲ್ಲಿ ಕಾವೇರಿ ತೀರ್ಥಸ್ವರೂಪಿಣಿಯಾದ ಸಂದರ್ಭವನ್ನು ಸಹಸ್ರಾರು ಮಂದಿ ಈ ಕ್ಷಣವನ್ನು ಕಣ್ತುಂಬಿಕೊಂಡರು.
ಪುಟ್ಟ ಕುಂಡಿಕೆಯಲ್ಲಿ ಕಾವೇರಿ ನದಿ ನೀರು, ಉಕ್ಕಿದ ಸಂದರ್ಭದಲ್ಲಿ ಯಾತ್ರಿಗಳು ಭಾವಪರವಶರಾದರು, ಕ್ಷೇತ್ರದ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಅರ್ಚಕರು ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿತು. ತಲಕಾವೇರಿಯಲ್ಲಿ ತೀರ್ಥೋದ್ಭವದ ಪುಣ್ಯ ಕ್ಷಣಕ್ಕಾಗಿ ಕಾಯುತ್ತಿದ್ದ ಭಕ್ತರ ಮೇಲೆ ಅರ್ಚಕರು ಕಾವೇರಿ ತೀರ್ಥವನ್ನು ಪ್ರೋಕ್ಷಿಸಿದರು.
ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿತ್ತು, ತಲಕಾವೇರಿಯಲ್ಲಿ ಯಾತ್ರಾರ್ಥಿಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಇನ್ನು ಒಂದು ತಿಂಗಳ ಕಾಲ ತಲಕಾವೇರಿ – ಭಾಗಮಂಡಲದಲ್ಲಿ ಕಾವೇರಿ ಜಾತ್ರೆಯ ಸಂಭ್ರಮ ಕಂಡುಬರಲಿದೆ.
ಈ ವರ್ಷ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರಗಳಲ್ಲಿ ಕಾವೇರಿ ತೀರ್ಥ ಸಂಗ್ರಹಣೆಗಾಗಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿಗಳನ್ನು ಸರ್ಕಾರ ನಿಷೇಧ ಮಾಡಿದೆ, ಭಾಗಮಂಡಲದಿಂದ ತಲಕಾವೇರಿಗೆ ದಿನವಿಡೀ ಯಾತ್ರಿಗಳು ಸಾಗರೋಪಾದಿಯಲ್ಲಿ ಕಾವೇರಿ ತೀರ್ಥ ಪಡೆಯಲು ತೆರಳುತ್ತಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…