ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.05ರ ಕನ್ಯಾರಾಶಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ.
ಬೆಳಗ್ಗಿನ ಜಾವ 3.30 ಗಂಟೆಯಿಂದಲೇ ಗೋಪಾಲಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಕಾವೇರಿ ಕುಂಡಿಕೆ ಬಳಿ ಪೂಜಾ ಕೈಂಕರ್ಯ ಸಾಗಿದೆ. ಮಹಾಸಂಕಲ್ಪ ಪ್ರಾರ್ಥನೆಯೊಂದಿಗೆ ಕಾವೇರಿ ಪೂಜೆ ಪ್ರಾರಂಭವಾಗಿದೆ.
ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಭಕ್ತರು ಆಗಮಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವಕ್ಕೆ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ತೀರ್ಥೋದ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಾವೇರಿ ತೀರ್ಥೋದ್ಭವ ಸಂದರ್ಭ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490