ಮೈಚೌಂಗ್‌ ಚಂಡಮಾರುತದ ಪ್ರವಾಹಕ್ಕೆ ನಲುಗಿದ ತಮಿಳುನಾಡು | ಉನ್ನತ ಮಟ್ಟದ ಸಭೆ ನಡೆಸಿದ ಮೋದಿ | ಮುಖ್ಯಮಂತ್ರಿ ಸ್ಟಾಲಿನ್‌ಗೆ ಧೈರ್ಯ ನೀಡಿದ ಪಿಎಂ

December 24, 2023
7:04 PM

ತಮಿಳುನಾಡು(TamilNadu) ಮೈಚೌಂಗ್‌ ಚಂಡಮಾರುತದಿಂದ(Cyclone Michaung)ಇನ್ನೂ ಚೇತರಿಸಿಕೊಂಡಿಲ್ಲ. ಪ್ರವಾಹದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಈ ಪರಿಸ್ಥಿತಿಯಲ್ಲಿ ರಾಜ್ಯವನ್ನು ಬೆಂಬಲಿಸಲು  ಪ್ರಧಾನಿ ಮೋದಿ(PM Narendra Modi) ನೇತೃತ್ವದಲ್ಲಿ ಪಿಎಂಒದಲ್ಲಿ ಉನ್ನತ ಮಟ್ಟದ ಸಭೆ(Meeting) ನಡೆದಿದೆ.  ಎನ್‌ಡಿಆರ್‌ಎಫ್(NDRF) ಮತ್ತು ಹೆಲಿಕಾಪ್ಟರ್(Helicopter) ಸೇರಿದಂತೆ ಸಶಸ್ತ್ರ ಪಡೆಗಳ(armed forces) ನಿಯೋಜನೆಯ ಹೆಚ್ಚಿನ ಅಗತ್ಯತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್(Union Defense Minister Union Defense Minister) ಕೂಡ ವಾರದ ಹಿಂದೆ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಸದ್ಯ ಪ್ರವಾಹ ಸಂತ್ರಸ್ತರಿಗೆ( ಆಹಾರ(Food), ಉತ್ತಮ ನೀರು ಪೂರೈಕೆ(Water) ಮಾಡಲಾಗುತ್ತಿದೆ.

Advertisement
Advertisement
Advertisement

ಭಾರೀ ಮಳೆಯಿಂದ ಬಹುತೇಕ ಗ್ರಾಮಗಳು ಮುಳುಗಡೆಯ ಜೊತೆಗೆ ಸಾವಿರಾರು ಎಕರೆ ಬೆಳೆಗಳಿಗೆ ಹಾನಿಯುಂಟಾಗಿದೆ. ಭಾರೀ ಮಳೆಗೆ ಹಲವು ಮನೆಗಳು ಕುಸಿದಿದ್ದು, ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರವಾಹದ ತೀವ್ರತೆ ಕಡಿಮೆಯಾಗಿದ್ದರೂ ಸಹ  ಕೆಸರು ತುಂಬಿ ತೀವ್ರ ತೊಂದರೆಯಾಗುತ್ತಿದೆ. ಇಂತಹ ಸನ್ನಿವೇಶಗಳ ನಡುವೆ ಕೇಂದ್ರ ರಾಜ್ಯ ಸರ್ಕಾರಗಳು ಜನರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದ್ದು, ಸ್ವತಹ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧೈರ್ಯ ಹೇಳಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪ್ರಧಾನಿ ಕಾರ್ಯಾಲಯ ಪರಿಶೀಲಿಸಿದೆ. ತಮಿಳುನಾಡಿನಲ್ಲಿ ಪ್ರವಾಹದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ರಾಜ್ಯಕ್ಕೆ ಬೆಂಬಲ ನೀಡಲು ಇಂದು ಪಿಎಂಒದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಪ್ರವಾಹದ ನಂತರದ ಪರಿಹಾರ ಮತ್ತು ಮುಂದಿನ ಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಪಿಎಂಒ ಅಧಿಕಾರಿಗಳು ತಮಿಳುನಾಡಿನ ಉನ್ನತ ಸರ್ಕಾರಿ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಮುಂದಾಗಿದೆ. ಇದಲ್ಲದೇ ಜನರ ಸುರಕ್ಷಿತೆಗಾಗಿ ಕೇಂದ್ರವು ಹೆಲಿಕಾಪ್ಟರ್‌ ಜೊತೆಗೆ ಎನ್‌ಡಿಆರ್‌ಎಫ್ ಸಶಸ್ತ್ರ ಪಡೆಗಳನ್ನು ಕೂಡ ನಿಯೋಜಿಸಿದೆ.ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದಲ್ಲಿ ಮಾಹಿತಿ ನೀಡುವಂತೆ ಸೂಚಿಸಲಾಗಿದ್ದು, ಬೆಳೆ, ಜೀವ ಮತ್ತು ಆಸ್ತಿ ನಷ್ಟವನ್ನು ನಿರ್ಣಯಿಸಲು ರಾಜ್ಯದ ಸಚಿವಾಲಯಗಳ ಸಮನ್ವಯದಲ್ಲಿ ಕೇಂದ್ರ ತಂಡದ ಭೇಟಿ ಕುರಿತು ಚರ್ಚಿಸಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ

Tamil Nadu is yet to recover from Cyclone Michaung. A high-level meeting was held today at the PMO under the leadership of Prime Minister Narendra Modi to review the post-flood situation and support the state in this situation. The meeting discussed the need for more deployment of armed forces including NDRF and helicopters.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ
ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |
January 19, 2025
7:03 AM
by: The Rural Mirror ಸುದ್ದಿಜಾಲ
ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror