2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಕೇಂದ್ರ ಸರ್ಕಾರದ ನೀತಿಗಳು ಸಹಾಯಕವಾಗಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಐಐಟಿ ಮದ್ರಾಸ್ ಹಳೆ ವಿದ್ಯಾರ್ಥಿಗಳ ಸಂಗಮ್ -2025 ಶೃಂಗಸಭೆಯಲ್ಲಿ ಮಾತನಾಡಿದ ಅವರು, ಭಾರತ ಈಗ ಜಾಗತಿಕವಾಗಿ, ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ತಾಂತ್ರಿಕ, ನಾವಿನ್ಯತೆಯನ್ನು ಹೆಚ್ಚಿಸಲು 50 ವರ್ಷಗಳ ಕಾಲ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಹೇಳಿದ್ದಾರೆ. ಇನ್ನೊಂದೆಡೆ ಅವರು, ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ದೇವನಹಳ್ಳಿಯಲ್ಲಿ ಏರೋಸ್ಪೇಸ್ ವಿಶೇಷ ಆರ್ಥಿಕ ವಲಯಕ್ಕೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel