ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ನಿಗಮ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ವಿದ್ಯುತ್ ಪಂಪ್ ಸೆಟ್ ಗಳಿಗೆ 19 ಸಾವಿರ ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂಧನ ಸಚಿವ ಕೆ ಜೆ ಜಾರ್ಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel