ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಲಿದೆ ವರ್ಷದ ಮೊದಲ ಚಂಡಮಾರುತ “ಟೌಕ್ಟೇ” | ಗಾಳಿ-ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ |

May 11, 2021
8:56 PM

ವರ್ಷದ ಮೊದಲ ಚಂಡಮಾರುತ ದೇಶದ ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಲಿದೆ. ಮ್ಯಾನ್ಮಾರ್‌ ಈ ಚಂಡಮಾರುತಕ್ಕೆ “ಟೌಕ್ಟೇ” (Tauktae) ಎಂದು ಹೆಸರು ಇರಿಸಿದೆ.

ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿ ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ಮ್ಯಾನ್ಮಾರ್ ತನ್ನ ದೇಶದಲ್ಲಿ  ಹೈ ಅಲರ್ಟ್ ಘೋಷಣೆ ಮಾಡಿದ್ದು ಮಹಾರಾಷ್ಟ್ರ, ಗುಜರಾತ್ ಮತ್ತು ಕೇರಳದ ಕಡೆಗೆ ಈ ಚಂಡಮಾರುತ ಸಾಗುತ್ತಿದೆ ಎಂದು ತಿಳಿಸಿದೆ.

ಮೇ.13 ರಿಂದ ಮೇ 16 ರವರೆಗೆ ಲಕ್ಷದ್ವೀಪ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ  ಮಳೆಯಾಗುವ ಸಾಧ್ಯತೆ ಇದ್ದು  ಮೇ 14 ರ ಹೊತ್ತಿಗೆ ಆಗ್ನೇಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ಕಡಿಮೆ ಒತ್ತಡದ ಪ್ರದೇಶವಾಗುವ ಸಾಧ್ಯತೆ ಇದೆ. ಮೇ 16 ರ ಸುಮಾರಿಗೆ ಚಂಡಮಾರುತದ ಪ್ರಭಾವ ತೀವ್ರವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಮೇ 15 ರಂದು ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಲಿದ್ದು  ಗಂಟೆಗೆ 40 ರಿಂದ 60 ಕಿ.ಮೀ ವೇಗದಿಂದ  ಲಕ್ಷದ್ವೀಪ, ಮಾಲ್ಡೀವ್ಸ್ ಪ್ರದೇಶಗಳಿಗೆ  ಅಪ್ಪಳಿಸಲಿದೆ. ಕೇರಳ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ತೀರಗಳಲ್ಲಿ ಭಾನುವಾರದವರೆಗೆ ಇದೇ ರೀತಿಯಲ್ಲಿ ಗಾಳಿ ಬೀಸುತ್ತವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹೀಗಾಗಿ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಮುಂಜಾಗ್ರತೆ ವಹಿಸಲು ಇಲಾಖೆ ಸೂಚಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror