ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ | ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು | ‌ ಕೆ ಆರ್ ಗೋಪಾಲಕೃಷ್ಣ

September 6, 2023
4:10 PM
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ  ಶಿಕ್ಷಕರ ದಿನಾಚರಣೆ ಕಾರ್ಯಕ್ರಮ‌ ನಡೆಯಿತು.

ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಾರೆ. ಶಿಕ್ಷಕ ಇಡೀ ಸಮಾಜದ ಪರಿವರ್ತಕ, ನಿರ್ಮಾತ್ರ. ಅವರು ಮಕ್ಕಳಲ್ಲಿ ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದೆಡೆ ಕರೆದುಕೊಂಡು ಹೋಗುವ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಎಂದು ಶ್ರೀ ಸೀತಾ ರಾಘವ ಪದವಿಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲರಾದ  ಕೆ ಆರ್ ಗೋಪಾಲಕೃಷ್ಣ  ಹೇಳಿದರು.

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ  ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಬಾಗಿತ್ವದಲ್ಲಿ ಆಚರಿಸಲ್ಪಟ್ಟ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳು ತಪ್ಪಿದಾಗ ತಿದ್ದುವ, ಒಳ್ಳೆಯ ಕೆಲಸ ಮಾಡಿದಾಗ ಪ್ರಶಂಸಿಸುವ ಮಾರ್ಗದರ್ಶಕರು. ಅವರ ಮಾತನ್ನು ಪಾಲಿಸುವುದೇ ನೀವು ಆಚರಿಸುವ ಶಿಕ್ಷಕರ ದಿನಾಚರಣೆಗೆ ಸಿಗುವ ಮಹತ್ವ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಯನ್ನು, ಸಾಧನೆಯನ್ನು ಕಂಡು ಖುಷಿ ಪಡುತ್ತಾರೆ. ನೀವು ಮಾಡುವ ಒಳ್ಳೆಯ ಕೆಲಸಗಳೇ ಶಿಕ್ಷಕರಿಗೆ ಕೊಡುವ ಗೌರವ ಎಂದು ತಮ್ಮ ವೃತ್ತಿ ಜೀವನವನ್ನು ನೆನಪಿಸಿಕೊಂಡರು.

ವೇದಿಕೆಯಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ವಿಶ್ವನಾಥ ಕೆ ಟಿ, ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ,  ರತ್ನಾವತಿ ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಂತಿಮ ಬಿಕಾಂ ವಿದ್ಯಾರ್ಥಿ ಜೋಸ್ಬಿನ್ ಬಾಬು ಸ್ವಾಗತಿಸಿ ಅಂತಿಮ ಬಿಎ ವಿದ್ಯಾರ್ಥಿನಿ ನಿರೀಕ್ಷಾ ವಂದಿಸಿದರು.
ದ್ವಿತೀಯ ಬಿ ಎ ವಿದ್ಯಾರ್ಥಿನಿ ಗಾನಾ ಹಾಗೂ ದ್ವಿತೀಯ ಬಿ ಕಾಂ ವಿದ್ಯಾರ್ಥಿನಿ ಅನ್ವಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror