ಭಾರಿ ಕುತೂಲದ ಪಂದ್ಯವಾಗಿರುವ ಅಹ್ಮದಾಬಾದ್#Ahamadabadನ ನರೇಂದ್ರ ಮೋದಿ ಸ್ಟೇಡಿಯಂ#Narendra Modi stadiumನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ಪಾಕಿಸ್ತಾನ#India vs Pakistan ನಡುವಣ ಪಂದ್ಯ ರೋಚಕತೆ ಸೃಷ್ಟಿಸಿದೆ. ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್ಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ ದೊಡ್ಡ ಸ್ಕೋರ್ ಕಲೆಹಾಕುವ ಸೂಚನೆ ನೀಡಿದ್ದ ಬಾಬರ್ ಪಡೆಗೆ ಕುಲ್ದೀಪ್ ಹಾಗೂ ಬುಮ್ರಾ ಶಾಕ್ ನೀಡಿ ಅಲ್ಪ ಮೊತ್ತಕ್ಕೆ ಕುಸಿಯುವಂತೆ ಮಾಡಿದರು. ಸದ್ಯ ಭಾರತ ಗೆಲ್ಲಲು 192 ರನ್ಗಳ ಅವಶ್ಯಕತೆ ಇದೆ.
ಟಾಸ್ ಸೋತು ಪಾಕ್ ಪರ ಇನ್ನಿಂಗ್ಸ್ ಆರಂಭಿಸಿದ ಅಬ್ದುಲ್ ಶಫೀಖ್ ಹಾಗೂ ಇಮಾನ್ ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. 8 ಓವರ್ ಆಗುವ ಹೊತ್ತಿಗೆ 41 ರನ್ ಗಳಿಸಿದ್ದಾಗ ಸಿರಾಜ್ ಬೌಲಿಂಗ್ನಲ್ಲಿ ಶಫೀಖ್ (20) ಎಲ್ಬಿ ಬಲೆಗೆ ಸಿಲುಕಿದರು. ನಂತರ ಇಮಾಮ್ (36) ಹಾರ್ದಿಕ್ ಪಾಂಡ್ಯ ಬೌಲಿಂಗ್ನಲ್ಲಿ ಕೀಪರ್ ರಾಹುಲ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆದರೆ, ಈ ಸಂದರ್ಭ ಜೊತೆಯಾದ ಪಾಕ್ ಅನುಭವಿ ಬ್ಯಾಟರ್ಗಳಾದ ನಾಯಕ ಬಾಬರ್ ಅಝಂ ಹಾಗೂ ಮೊಹಮ್ಮದ್ ರಿಝ್ವಾನ್ ಎಚ್ಚರಿಕೆಯ ಆಟ ಪ್ರದರ್ಶಿಸಿದರು.
ಭಾರತೀಯ ಬೌಲರ್ಗಳ ಮರ್ಮವನ್ನು ಅರಿತ ಬಾಬರ್-ರಿಝ್ವಾನ್ ಜೋಡಿ 82 ರನ್ಗಳ ಕಾಣಿಕೆ ನೀಡಿದರು. ಫಾರ್ಮ್ ವೈಫಲ್ಯದಿಂದ ಬಳಲುತ್ತಿದ್ದ ಬಾಬರ್ ಅರ್ಧಶತಕ ಸಿಡಿಸಿದರು. ಆದರೆ, 50 ರನ್ ಗಳಿಸಿದ ಕೂಡಲೇ ಬಾಬರ್ ಅವರು ಸಿರಾಜ್ ಬೌಲಿಂಗ್ನಲ್ಲಿ ಬೌಲ್ಡ್ ಆದರು. ಇದರ ಬೆನ್ನಲ್ಲೆ ಕುಲ್ದೀಪ್, ಸೌದ್ ಶಕೀಲ್ (6) ಅವರನ್ನು ಎಲ್ಬಿಡಬ್ಲ್ಯೂ ಮಾಡಿದರೆ, ಇಫ್ತಿಖರ್ ಅಹ್ಮದ್ರನ್ನು (4) ಬೌಲ್ಡ್ ಮಾಡಿದರು. ಅತ್ತ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ರಿಝ್ವಾನ್ 49 ರನ್ ಗಳಿಸಿದ್ದಾಗ ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಶಬಾದ್ ಖಾನ್ ಕೂಡ 2 ರನ್ಗೆ ಔಟಾದರು.
155 ರನ್ಗೆ 3ನೇ ವಿಕೆಟ್ ಕಳೆದುಕೊಂಡ ಪಾಕಿಸ್ತಾನ 171 ರನ್ ಆಗುವ ಹೊತ್ತಿಗೆ 7 ವಿಕೆಟ್ ಪತನಗೊಂಡಿತು. ದಿಢೀರ್ ಕುಸಿತದಿಂದ ಬಾಬರ್ ಪಡೆ ಮೇಲೇಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 42.5 ಓವರ್ಗಳಲ್ಲಿ 191 ರನ್ಗಳಿಗೆ ಆಲೌಟ್ ಆಯಿತು. ಭಾರತ ಪರ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಿತ್ತರು.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…