ಸುದ್ದಿಗಳು

ಪ್ರಾಕೃತಿಕ ವಿಕೋಪ ಎದುರಿಸಲು ತಂಡಗಳು ಸನ್ನದ್ಧ | 87 ಕಾಳಜಿ ಕೇಂದ್ರಗಳಿಗೆ ಗುರುತು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಗೆ ಮುಂಗಾರು ಜೂನ್ 4ಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಜೂನ್ 1ಕ್ಕೆ   ಪ್ರಾಕೃತಿಕ ವಿಕೋಪ ಎದುರಿಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ದ ಸ್ಥಿತಿಯಲ್ಲಿರಲಾಗುವುದು ಎಂದು ದಕ ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ಹೇಳಿದ್ದಾರೆ.

Advertisement
Advertisement

ಸೋಮವಾರ  ಮಂಗಳೂರು ನಗರದ ಕದ್ರಿಯ ಸಕ್ರ್ಯೂಟ್ ಹೌಸ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆ ಕುರಿತಂತೆ  ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್‌ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ  ಸಭೆಯಲ್ಲಿ  ಮಾತನಾಡಿದರು.ಈ ಹಿಂದೆ ಜಿಲ್ಲೆಯಲ್ಲಿ ಜರುಗಿದ ಪ್ರಾಕೃತಿಕ ವಿಕೋಪ ವಿಕೋಪಗಳ ಆಧಾರದ ಮೇಲೆ ಈಗಾಗಲೇ 87 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ, ಸಂತ್ರಸ್ತರ ಸ್ಥಳಾಂತರ ಸೇರಿದಂತೆ ಅಲ್ಲಿ ಊಟ, ಉಪಹಾರ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಎಸ್ ಡಿ ಆರ್ ಎಫ್ ನ ತಂಡಗಳು ಸಿದ್ದವಿದ್ದು, ಎನ್ ಡಿ ಆರ್ ಎಫ್ ತಂಡ ಆಗಮಿಸಬೇಕಿದೆ ಎಂದರು. ವಿಕೋಪ ಅಥವಾ ಪ್ರವಾಹದಿಂದ ಹಾನಿಯಾದರೆ ಕೂಡಲೇ ಪರಿಹಾರ ನೀಡಲು ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಮೂರುವರೆ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಸಭಾಧ್ಯಕ್ಷರಾದ ಯು.ಟಿ. ಖಾದರ್ ಮಾತನಾಡಿ, ಜಿಲ್ಲೆಯ ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲೂ ತಳಮಟ್ಟದಲ್ಲಿ ಅಧಿಕಾರಿ, ಸಿಬ್ಬಂದಿಗಳ ತಂಡವನ್ನು ಈಗಲೇ ಸಿದ್ಧಪಡಿಸಬೇಕು, ಪ್ರಾಕೃತಿಕ ವಿಕೋಪಗಳಿಂದ ಒದಗಬಹುದಾದ ಸಂಭವನೀಯ ಅಪಾಯಗಳನ್ನು ತಡೆಗಟ್ಟುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಪ್ರಾಕೃತಿಕ ವಿಕೋಪಗಳಿಂದಾಗುವ ಹಾನಿ, ಸಮಸ್ಯೆಗಳನ್ನು ಪರಿಹರಿಸುವ ಸಂದರ್ಭದಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳ ಯುವಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ತಂಡವನ್ನು ಸಿದ್ಧಪಡಿಸಿ ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ತಂಡದೊಂದಿಗೆ ನಿಯೋಜಿಸಬೇಕು ಇದಕ್ಕಾಗಿ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸಭೆಯೊಂದನ್ನು ನೆಡೆಸಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.‌

ಪ್ರಮುಖವಾಗಿ ಮೆಸ್ಕಾಂನವರು ಅರಣ್ಯ ಇಲಾಖೆಯೊಂದಿಗೆ ಸೇರಿಕೊಂಡು ಅಪಾಯಕಾರಿ ಗಿಡ ಮರಗಳನ್ನು ತೆರವುಗೊಳಿಸುವುದು ಹಾಗೂ ವಿದ್ಯುತ್ ತಂತಿಗಳು ಹಾದು ಹೋಗಿರುವ ಕಡೆಗಳಲ್ಲಿರುವ ಮರ ಗಿಡಗಳ ಅಪಾಯಕಾರಿ ರಂಬೆ ಕೊಂಬೆಗಳನ್ನು ಕತ್ತರಿಸಬೇಕು, ವಿದ್ಯುತ್ ತಂತಿಗಳು ಬಿದ್ದು ಯಾವುದಾದರೂ ಪ್ರಾಣ ಹೋದಲ್ಲಿ ಸಂಬಂಧಪಟ್ಟ ಮೆಸ್ಕಾಂನ ಜೂನಿಯರ್ ಇಂಜಿನಿಯರ್ ಹಾಗೂ ಅರಣ್ಯ ಇಲಾಖೆಯ ರೇಂಜ್ ಆಫೀಸರ್ ಗಳನ್ನು ನೇರವಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶುಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತರಾದ ರಾಜು, ಗಿರೀಶ್ ನಂದನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

4 hours ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

4 hours ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

14 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

15 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

15 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

15 hours ago