ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಪಿ.ಮುರಳೀಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.
ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.
ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.