Advertisement
Political mirror

ಬಿಜೆಪಿ ರಾಷ್ಟ್ರೀಯ ಯುವಘಟಕದ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

Share
ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಎಂಟು ತಿಂಗಳ ಬಳಿಕ ಜೆ.ಪಿ. ನಡ್ಡಾ ಅವರು ಹೊಸ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದ್ದು, ರಾಜ್ಯದ ಮೂವರು ರಾಜಕಾರಣಿಗಳಿಗೆ ಸ್ಥಾನ ಲಭಿಸಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.

 

 

 

 

 

 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್, ಪಿ.ಮುರಳೀಧರ್‌ ರಾವ್‌, ಅನಿಲ್‌ ಜೈನ್‌, ಸರೋಜ್‌ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.

ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.

ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್‌ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

3 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

4 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

4 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

14 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

21 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

22 hours ago