ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು

October 23, 2025
8:25 PM

ಮದುವೆಯಾದ ನಂತರದ ಮೊದಲ ದೀಪಾವಳಿಯನ್ನು ಗೋಪೂಜೆಯೊಂದಿಗೆ ಸಂಸದ ತೇಜಸ್ವಿಸೂರ್ಯ ಹಾಗೂ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ ಅವರು  ಶ್ರೀರಾಮಚಂದ್ರಾಪುರ ಮಠದಲ್ಲಿ ಆಚರಿಸಿದರು.

ಬೆಂಗಳೂರಿನ ಗಿರಿನಗದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖೆಯಲ್ಲಿ ನಡೆದ ‘ಗೋದೀಪ – ದೀಪಾವಳಿ ಗೋಪೂಜೆ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ರಾಘವೇಶ್ವರ ಶ್ರೀಗಳು, ಹಳ್ಳಿಗಳು ಹಾಗೂ ಹಳ್ಳಿಗರು ಬೆಂಗಳೂರನ್ನು ಸೇರುತ್ತಾ ಸಾಗಿದಂತೆ ಬೆಂಗಳೂರು ದೊಡ್ಡದಾಗುತ್ತಾ ಹೋಗಿದೆ. ನಾವು ಹಳ್ಳಿಗಳನ್ನು ಮಾತ್ರ ಬಿಟ್ಟುಬಂದಿಲ್ಲ, ಈ ಮಾಯಾ ನಗರಿಗೆ ಬರುವಾಗ ನಮ್ಮ ಸಂಸ್ಕೃತಿಯನ್ನೂ ಬಿಟ್ಟು ಬಂದಿರುವುದು ದುರಂತ. ಇಂದು ಹಳ್ಳಿಗಳಲ್ಲಿಯೂ ಕೂಡ ನಗರದ ಸಂಸ್ಕೃತಿ ಬೆಳೆಯುತ್ತಿರುವುದು ಆತಂಕಕಾರಿ ಎಂದರು. ಭಗವಾನ್ ಶ್ರೀಕೃಷ್ಣನು ಗೋಪೂಜೆಯ ಪ್ರವರ್ತಕನಾಗಿದ್ದು, ಗೋವು ಜನರ ಜೀವನದ ಆಧಾರವಾದ್ದರಿಂದ ಗೋವಿಗೆ ಪೂಜೆ ಸಲ್ಲಬೇಕು ಎಂದು ಭಾಗವತದಲ್ಲಿ ಶ್ರೀಕೃಷ್ಣ ಹೇಳಿದ್ದಾನೆ. ನಮ್ಮ ಜೀವನದಲ್ಲಿ ಗೋವನ್ನು ತಂದರೆ ಅದೇ ನಿಜವಾದ ಗೋಪೂಜೆಯಾಗಿದ್ದು, ಗೋವನ್ನು ನಮ್ಮ ಜೀವನದ ಜೋಡಿಸಿಕೊಳ್ಳಬೇಕು. ಆದರೆ ಗೋವಿನ ಮರಣವನ್ನು ನಮ್ಮ ಜೀವನದಲ್ಲಿ ಜೋಡಿಸಿಕೊಂಡಿರುವುದು ದುರಂತವಾಗಿದೆ ಎಂದರು. ಪೇಟೆಯಲ್ಲಿ ಗೋಪೂಜೆ ಮಾಡಲು ಗೋವು ಇಲ್ಲ ಹಾಗೂ ಪೂಜೆ ಮಾಡುವ ಮನಸ್ಸು ಇಲ್ಲಾ ಎಂಬಂತಾಗಿದೆ. ಈ ಕುರಿತಾಗಿ ಜಾಗೃತಿ ಮೂಡಿಸಲು ಇಂದು ವಿವಿಧ ಕ್ಷೇತ್ರಗಳ ಗಣ್ಯರಿಂದ ಪೂಜೆ ನಡೆಸಲಾಗಿದೆ. ಈ ಸಂಸ್ಕೃತಿ ಮತ್ತಷ್ಟು ಬೆಳೆಯಲಿ ಎಂದು ಆಶಿಸಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಮದುವೆಯಾದ ನಂತರ ಮೊದಲ ದೀಪಾವಳಿಯನ್ನು ಗೋಪೂಜೆಯೊಂದಿಗೆ ಶ್ರೀರಾಮಚಂದ್ರಾಪುರ ಮಠದಲ್ಲಿ ಆಚರಿಸುತ್ತಿರುವುದು ನಮ್ಮ ಪಾಲಿನ ಭಾಗ್ಯವಾಗಿದೆ. ದೇಶದಲ್ಲಿ ಗೋಸಂರಕ್ಷಣೆಗೆ ಶ್ರೀಗಳ ಕೊಡುಗೆ ಅಪಾರವಾಗಿದ್ದು, ಬೆಂಗಳೂರು ನಗರದಲ್ಲಿ ದೇಶಿ ಗೋತಳಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಅವಕಾಶ ಲಭಿಸಿದ್ದು ಧನ್ಯತೆಯ ಕ್ಷಣವಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement

ಇದಕ್ಕೂ ಮೊದಲು ವಿಶ್ರಾಂತ ಮುಖ್ಯ ನ್ಯಾಯಾಧೀಶ ಪಿ.ಎಸ್. ದಿನೇಶ್ ಕುಮಾರ್ ದಂಪತಿಗಳು, ಸಂಸದ ತೇಜಸ್ವೀ ಸೂರ್ಯ ದಂಪತಿಗಳು, ಶಾಸಕ ರವಿಸುಬ್ರಹ್ಮಣ್ಯ ಎಲ್. ಎ. ದಂಪತಿಗಳು, ಹಿರಿಯ ನ್ಯಾಯವಾದಿ ಡಾ| ಅರುಣ್ ಶ್ಯಾಮ್ ಎಮ್ ದಂಪತಿಗಳು, ಖ್ಯಾತ ಲೇಖಕ, ಚಿಂತಕ ಡಾ. ನಾ. ಸೋಮೇಶ್ವರ ದಂಪತಿಗಳು, ರಿಪಬ್ಲಿಕ್ ನ್ಯೂಸ್ ಕನ್ನಡದ ಸಂಪಾದಕಿ ಶೋಭಾ ಮಳವಳ್ಳಿ ದಂಪತಿಗಳು, ಸಂಸ್ಕೃತಿ ಚಿಂತಕಿ ಡಾ| ಆರತಿ ವಿ. ಬಿ. ದಂಪತಿಗಳು, ವಿದ್ವಾನ್ ಶ್ರೀಕಂಠ ಶಾಸ್ತ್ರೀ ದಂಪತಿಗಳು, ವಿಕ್ರಮ ಪತ್ರಿಕೆ ಸಂಪಾದಕ ರಮೇಶ್ ದೊಡ್ಡಪುರ, ಗೋ ಸೇವಕ ಕುಮಾರ ಸುಬ್ರಹ್ಮಣ್ಯ ಜಾಗೀರ್ದಾರ್ ದಂಪತಿಗಳು, ಲಕ್ಷ್ಮೀನಾರಾಯಣ ಪ್ರಸಾದ ಪಕಳಕುಂಜ ದಂಪತಿಗಳು 10 ವಿವಿಧ ತಳಿಯ ಸಾಲಂಕೃತ ಗೋವುಗಳಿಗೆ ಏಕಕಾಲಕ್ಕೆ ಸಾಂಪ್ರದಾಯಿಕ ಗೋಪೂಜೆಯನ್ನು ಸಲ್ಲಿಸಿದರು.

ಶಿವಶ್ರೀ ಸ್ಕಂದಪ್ರಸಾದ ಮತ್ತು ತಂಡದವರಿಂದ ನಡೆದ ‘ಗೋ ಗಾನಾಮೃತ’ ಸಂಗೀತ ಕಾರ್ಯಕ್ರಮ ಜನಮನ ರಂಜಿಸಿತು. ಬೆಳಗ್ಗೆಯಿಂದ ನಡೆದ ಸಾರ್ವಜನಿಕ ಗೋಪೂಜೆಯಲ್ಲಿ ನೂರಾರು ಗೋಪ್ರೇಮಿಗಳ ಭಾಗಿಗಳಾಗಿ ಪೂಜೆ ಹಾಗೂ ಗೋಗ್ರಾಸವನ್ನು ಸಮರ್ಪಿಸಿದರು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಲೆ ಬೀಜ ತಿನ್ನುವಾಗ ಈ ಅಂಶವನ್ನು ನೆನಪಿನಲ್ಲಿಟ್ಟುಕೊಳ್ಳಿ..!
January 6, 2026
10:41 PM
by: ರೂರಲ್‌ ಮಿರರ್ ಸುದ್ದಿಜಾಲ
ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು
January 6, 2026
10:12 PM
by: ರೂರಲ್‌ ಮಿರರ್ ಸುದ್ದಿಜಾಲ
ಮಾತೃ ವಂದನಾ ಯೋಜನೆ – ಗರ್ಭಿಣಿಯರಿಗೆ 6000 ಜಮೆ
January 6, 2026
10:10 PM
by: ರೂರಲ್‌ ಮಿರರ್ ಸುದ್ದಿಜಾಲ
ಅಡಿಕೆ ಪ್ರತ್ಯೇಕಿಸಲು ಎಐ ಚಾಲಿತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ ಸಂಸ್ಥೆ
January 6, 2026
9:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror