ರಾಜ್ಯದ ಕೆಲವೆಡೆ ಹೆಚ್ಚಿನ ತಾಪಮಾನ | ರಾಯಚೂರಿನಲ್ಲಿ 44 ಡಿಗ್ರಿ ದಾಖಲು | ಬಿಸಿಲ ತಾಪಕ್ಕೆ ಕೃಷಿಯೂ ತತ್ತರ | ಮಾವಿನ ಬೆಳೆಯೂ ಗಣನೀಯ ಕುಸಿತ |

March 29, 2024
11:15 PM
ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಜನರು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ.

ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಮಳೆಯ ಲಕ್ಷಣ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಇದೀಗ ರಾಯಚೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ ವರದಿಯಾಗಿದೆ (44.3 ಡಿಗ್ರಿ ) .ಕೊಡಗು ಜಿಲ್ಲೆಯಲ್ಲಿ ಮಾತ್ರ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಕಡಿಮೆ (37.4 ಡಿಗ್ರಿ ) ವರದಿಯಾಗಿದೆ.

Advertisement
Advertisement

ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಧಿಕ ತಾಪಮಾನ ಹೊಂದಿದ ವರ್ಷವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ, ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಹೆಚ್ಚಿನ ತಾಪಮಾನ ವರದಿಯಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಎ.ಪ್ರಸಾದ್ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಮಾವು ಬೆಲೆ ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾನೆಯಲ್ಲಿ ಶೇ. 60-70ರಷ್ಟು ಕುಸಿತವಾಗಲಿದೆ. ಈ ಬಾರಿಯ ಮಾವು ಹಂಗಾಮಿನ ಆರಂಭದಲ್ಲಿ 14ರಿಂದ 16 ಲಕ್ಷ ಮೆಟ್ರಿಕ್ ಟನ್ ಮಾವು ಇತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆಯಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಮಾವಿನ ಗಿಡಗಳು ಅಕಾಲಿಕವಾಗಿ ಚಿಗುರೊಡೆದು ಹೂವು, ಕಾಯಿಗಳನ್ನು ಉದುರಿಸುತ್ತಿವೆ. ಹೀಗಾಗಿ ಶೇ.70ರಷ್ಟು ಫಸಲು ನಾಶವಾಗಲಿದೆ. ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಧಾರವಾಡದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿದೆ.  ರಾಮನಗರ ಹೊರತುಪಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡದಲ್ಲೂ ಉತ್ಪಾದನೆ ಕಡಿಮೆಯಿದೆ. ಎಲ್ಲೆಡೆ ವಾತಾವರಣದಲ್ಲಿ ಶುಷ್ಕತೆಯ ಪ್ರಮಾಣ ಹೆಚ್ಚಾಗಿದ್ದು, ಭೂಮಿಯಲ್ಲಿ ತೇವಾಂಶವಿಲ್ಲದೆ ಅತಿಯಾದ ಬಿಸಿಲಿಗೆ ಮಾವು ಎರಡು ಬಾರಿ ಚಿರುರೊಡೆದಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಲೋಕಸಭಾ ಕ್ಷೇತ್ರದ ಸೋಲು ಗೆಲುವಿನ ಸಿಂಪಲ್ ಲೆಕ್ಕಾಚಾರ……. : ಮತಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ
April 29, 2024
12:46 PM
by: The Rural Mirror ಸುದ್ದಿಜಾಲ
ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ
ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror