ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಮಳೆಯ ಲಕ್ಷಣ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಇದೀಗ ರಾಯಚೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ ವರದಿಯಾಗಿದೆ (44.3 ಡಿಗ್ರಿ ) .ಕೊಡಗು ಜಿಲ್ಲೆಯಲ್ಲಿ ಮಾತ್ರ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಕಡಿಮೆ (37.4 ಡಿಗ್ರಿ ) ವರದಿಯಾಗಿದೆ.
ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಧಿಕ ತಾಪಮಾನ ಹೊಂದಿದ ವರ್ಷವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ, ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಹೆಚ್ಚಿನ ತಾಪಮಾನ ವರದಿಯಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಎ.ಪ್ರಸಾದ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಮಾವು ಬೆಲೆ ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾನೆಯಲ್ಲಿ ಶೇ. 60-70ರಷ್ಟು ಕುಸಿತವಾಗಲಿದೆ. ಈ ಬಾರಿಯ ಮಾವು ಹಂಗಾಮಿನ ಆರಂಭದಲ್ಲಿ 14ರಿಂದ 16 ಲಕ್ಷ ಮೆಟ್ರಿಕ್ ಟನ್ ಮಾವು ಇತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆಯಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಮಾವಿನ ಗಿಡಗಳು ಅಕಾಲಿಕವಾಗಿ ಚಿಗುರೊಡೆದು ಹೂವು, ಕಾಯಿಗಳನ್ನು ಉದುರಿಸುತ್ತಿವೆ. ಹೀಗಾಗಿ ಶೇ.70ರಷ್ಟು ಫಸಲು ನಾಶವಾಗಲಿದೆ. ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಧಾರವಾಡದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿದೆ. ರಾಮನಗರ ಹೊರತುಪಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡದಲ್ಲೂ ಉತ್ಪಾದನೆ ಕಡಿಮೆಯಿದೆ. ಎಲ್ಲೆಡೆ ವಾತಾವರಣದಲ್ಲಿ ಶುಷ್ಕತೆಯ ಪ್ರಮಾಣ ಹೆಚ್ಚಾಗಿದ್ದು, ಭೂಮಿಯಲ್ಲಿ ತೇವಾಂಶವಿಲ್ಲದೆ ಅತಿಯಾದ ಬಿಸಿಲಿಗೆ ಮಾವು ಎರಡು ಬಾರಿ ಚಿರುರೊಡೆದಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?