ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದ್ದು(Rain), ಪ್ರವಾಹ(Flood) ಮತ್ತು ಭೂಕುಸಿತದಿಂದ(Land slide) ಜನತೆ ಕಂಗೆಟ್ಟಿದ್ದಾರೆ. ದೇಶದಲ್ಲಿ ಇದುವರೆಗೂ 155 ಜನರು ಸಾವಿಗೀಡಾಗಿದ್ದು, 236 ಮಂದಿ ಗಾಯಗೊಂಡಿದ್ದಾರೆ. ಪೂರ್ವ ಆಫ್ರಿಕಾದಾದ್ಯಂತ (East Africa) ತೀವ್ರವಾದ ಮಳೆ ಮುಂದುವರಿದಿದೆ.
ಎಲ್ ನಿನೋ(L Nino) ಹವಾಮಾನದ ಮಾದರಿಯು ಭಾರೀ ಮಳೆಗೆ ಕಾರಣವಾಗಿದೆ. ಇದರಿಂದಾಗಿ ಪ್ರವಾಹ ಹೆಚ್ಚಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ರೈಲು ಮಾರ್ಗಗಳು ನಾಶವಾಗಿವೆ ಎಂದು ಪ್ರಧಾನಿ ಕಾಸಿಮ್ ಮಜಲಿವಾ ತಿಳಿಸಿದ್ದಾರೆ. ಪ್ರವಾಹದಿಂದ 51,000 ಮನೆಗಳಿಗೆ ಹಾನಿಯಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ. ಜನರ ರಕ್ಷಣೆಗೆ ತುರ್ತು ಸೇವೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವವರಿಗೆ ಸೂಕ್ತ ನೆರವು ಒದಗಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಮಳೆಗಾಲದಲ್ಲಿ ಪೂರ್ವ ಆಫ್ರಿಕಾದ ಪ್ರದೇಶವು ವಾಡಿಕೆಗಿಂತ ಹೆಚ್ಚಿನ ಮಳೆಯಿಂದ ಜರ್ಜರಿತವಾಗಿದೆ. ನೆರೆಯ ಬುರುಂಡಿ ಮತ್ತು ಕೀನ್ಯಾದಲ್ಲಿ ಸಹ ಪ್ರವಾಹ ವರದಿಯಾಗಿದೆ.
ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ…