ರಾಜ್ಯ ರಾಜಧಾನಿ ಬೆಂಗಳೂರು(Bengaluru) ನಗರದಲ್ಲಿ ನೀರಿನ ಅಭಾವ(Water crisis) ತಲೆದೋರಿದ್ದು ಇದರ ಜೊತೆಗೇ ನಗರದ ಉಷ್ಣಾಂಶದಲ್ಲಿ(Temperature) ಹೆಚ್ಚಳವಾಗಿದೆ. ಪ್ರಸ್ತಕ ತಿಂಗಳಲ್ಲಿ 34 ಡಿಗ್ರಿ ಸೆಲಿಯಸ್ಸ್ ಉಷ್ಣಾಂಶ ಇದ್ದರೆ ಮೇ ತಿಂಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ (IASc) ಪರಿಸರ ವಿಜ್ಞಾನಿ ಡಾ. ಟಿ ವಿ ರಾಮಚಂದ್ರರಾವ್ ಆತಂಕ ವ್ಯಕ್ತಪಡಿಸಿದರು. ಕರ್ನಾಟಕ(Karnataka) ನೆಲ – ಜಲ ಸಂರಕ್ಷಣಾ ಸಮಿತಿ(Soil – Water Conservation Committee) ವತಿಯಿಂದ ನಗರದ ಗಾಂಧಿಭವನದಲ್ಲಿ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಸಮಸ್ಯೆ(Drinking water problem) ಕುರಿತ ವಿಚಾರ ಸಂಕಿರಣದಲ್ಲಿ(Seminar) ಭಾಗವಹಿಸಿ ಮಾತನಾಡಿದ ಅವರು, ಕೆರೆ ಸಂರಕ್ಷಣೆ(Save lakes) ಕುರಿತಂತೆ ಆಧ್ಯಯನ ಮಾಡಿರುವ ಬಗ್ಗೆ ವಿವರಣೆ ನೀಡಿದರು.
ಮಳೆನೀರು ಕೊಯ್ಲುನಿಂದ ನಗರಕ್ಕೆ 15 ಟಿಎಎಂಸಿ ನೀರು: ನಗರದಲ್ಲಿ ಮಳೆ ನೀರು ಕೊಯ್ಲು ಕಡ್ಡಾಯಪಡಿಸಿದರೆ ಬೆಂಗಳೂರಿಗೆ 15 ಟಿಎಂಸಿ ನೀರು ಸಂಗ್ರಹಿಸಬಹುದಾಗಿದೆ. ಶೇ.70ರಷ್ಟು ನೀರು ಇದರಿಂದಲೇ ಮಳೆ ನೀರು ಕೊಯ್ಲು ಪದ್ದತಿಯಿಂದ ನೀರಿನ ಬೇಡಿಕೆಯನ್ನ ತಗ್ಗಿಸಬಹುದಾಗಿದೆ. ಸರ್ಕಾರವು ಉದ್ದೇಶಿಸಲಾಗಿರುವ ಮೇಕೆದಾಟು ಯೋಜನೆ ವಿರೋಧ ವ್ಯಕ್ತಪಡಿಸಿದ ರಾಮಚಂದ್ರರಾವ್, ಯೋಜನೆಗಾಗಿ 5 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಕ್ರಾಂಕೀಟೀಕರಣ ಮಾಡಿ ನೀರು ಸಂಗ್ರಹಿಸುವ ಬದಲು ಇರುವ ವಿವಿಧ ಜೀವ ಪ್ರಭೇದ ಕಾಡುಗಳನ್ನ ಉಳಿಸಿ ಬೆಳೆಸಿದರೆ ಅಗತ್ಯ ಇರುವಷ್ಟು ನೀರು ಸಂಗ್ರಹಿಸಿಕೊಳ್ಳುವುದು ಬುದ್ಧಿವಂತಿಕೆಯಲ್ಲವೇ ಎಂದು ಪ್ರಶ್ನಿಸಿದರು.
ಕರ್ನಾಟಕ ನೆಲ – ಜಲ ಸಂರಕ್ಷಣಾ ಸಮಿತಿ ಸಂಚಾಲಕ ಕುರುಬುರು ಶಾಂತಕುಮಾರ್ ಮಾತನಾಡಿ, ಕುಡಿಯುವ ನೀರಿಗಾಗಿ ಜನ ಹಾಹಾಕಾರ ಪಡುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಭೀಮ, ಕೃಷ್ಣಾ, ಘಟಪ್ರಭಾ, ಮಹದಾಯಿ, ಕಾವೇರಿ ನದಿಗಳಿಂದ ನೀರು ಹರಿಸುವಂತೆ ರೈತರು ಘೋರ ಆಕ್ರಂದನ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ವಾರಕ್ಕೊಮ್ಮೆ ನೀರು ಸಿಗುವಂತಾಗಿದೆ. ಇಂಥ ಸ್ಥಿತಿಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಸ್ಥಗಿತಗೊಳಿಸುವ ಡಿಎಂಕೆ ಚುನಾವಣಾ ಪ್ರಣಾಳಿಕೆ ಏಕೆ ಬೇಕು ಕುಡಿಯೋ ನೀರಿನ ವಿವಾದ ಕೆಣಕಿ ಜನರನ್ನ ರೂಚ್ಚಿಗೆಳಿಸುವ ರಾಜಕೀಯ ಪಕ್ಷಕ್ಕೆ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಲಿ. ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಿ.
ನೀರಿನ ಸಂಕಷ್ಟ ಕಾಲದಲ್ಲಿ ರೈತರು ಕೂಡ ಬೆಳೆ ಪದ್ಧತಿ ಬದಲಾಯಿಸಿಕೊಳ್ಳಬೇಕು. ವೇಸ್ಟ್ ವಾಟರ್ ಪುನರ್ ಬಳಕೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಕಳೆದ ಆರು ತಿಂಗಳ ಹಿಂದೆ ಕಾವೇರಿ ಹೋರಾಟ ಮಾಡಿದಾಗ ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಸರ್ಕಾರದ ಗಮನ ಸೆಳೆದರೂ ಪ್ರಯೋಜನವಾಗಲಿಲ್ಲ. ಮತ್ತೊಂದು ಕಡೆ ಬೆಂಗಳೂರು ನಗರದಲ್ಲಿರುವ ಕೆರೆ ಕಟ್ಟೆಗಳನ್ನ ಮುಚ್ಚಿ ಭೂ ಮಾಫಿಯಾದವರು ದೊಡ್ಡ ಕಟ್ಟಡಗಳ ನಿರ್ಮಾಣ ಮಾಡಿದ ಕಾರಣವೂ ಸಮಸ್ಯೆಯ ಮೂಲವಾಗಿದೆ ಇಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಾಗಬೇಕು. ರಾಜ್ಯ ಸರ್ಕಾರದ ವೈಫಲ್ಯದಿಂದ ನಾವು ಸಂಕಷ್ಟ ಪಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…